ದಾವಣಗೆರೆ: ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ಐಟಿಐ ವಿದ್ಯಾರ್ಥಿಯೋರ್ವನಿಗೆ ಹೋರಿ ತಿವಿದ ಪರಿಣಾಮ ಸಾವನ್ನಪ್ಪಿ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಕಲ್ಮನೆ ಗ್ರಾಮದಲ್ಲಿ ನಡೆದಿದೆ.
ಹೋರಿ ಬೆದರಿಸುವ ಸ್ಪರ್ಧೆ ವೀಕ್ಷಿಸಲು ಹೋಗಿದ್ದಾಗ ಈ ಘಟನೆ ನಡೆದಿದೆ. ವಿದ್ಯಾರ್ಥಿಯನ್ನು ನ್ಯಾಮತಿ ತಾಲ್ಲೂಕಿನ ಹೊಸಮಳಲಿ ಗ್ರಾಮದ ಪುನೀತ್ ಆಚಾರ್ (19) ಎಂದು ಗುರುತಿಸಲಾಗಿದೆ. ಈತ ಪಟ್ಟಣದ ಎಸ್ಎಸ್ ಐಟಿಐ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ಹಾಸ್ಟೆಲ್‌ನಲ್ಲಿ ಉಳಿದುಕೊಂಡಿದ್ದನು. ಮೃತನ ತಂದೆ ಗಜೇಂದ್ರ ಆಚಾರ್ ಸ್ಪರ್ಧೆ ಆಯೋಜಕರ ವಿರುದ್ಧ ದೂರು ನೀಡಿದ್ದು, ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.