ದಾವಣಗೆರೆ: ಬಸವಣ್ಣನವರ ಸಾರ್ವತ್ರಿಕ ಮೌಲ್ಯಗಳಾದ ಜಾತಿ ರಹಿತ ಸಮಾಜ, ಕಾಯಕದ ಮಹತ್ವ, ವರ್ಗರಹಿತ ಸಮಾಜ, ಜೀವನ ಮಾರ್ಗ ಸರ್ವಕಾಲಕ್ಕೂ ದಾರಿದೀಪವಾಗಿದೆ. ಸಾಂಸ್ಕೃತಿಕ ನಾಯಕ ಬಸವಣ್ಣನವರ ಭಾವಚಿತ್ರವನ್ನು ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಅಳವಡಿಸಲು ಸೂಚಿಸಲಾಗಿರುತ್ತದೆ.
ವಿಶ್ವಗುರು ಬಸವಣ್ಣನವರ ಭಾವಚಿತ್ರವನ್ನು ಮುಖ್ಯಮಂತ್ರಿಗಳು ಫೆಬ್ರವರಿ 13ರಂದು ವಿಧಾನಸೌಧದಲ್ಲಿ ಅನಾವರಣಗೊಳಿಸಲಿದ್ದಾರೆ. ಅದರಂತೆ ಫೆಬ್ರವರಿ 17ರಂದು ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ, ತಾಲ್ಲೂಕು ಕೇಂದ್ರಗಳಲ್ಲಿ ಸ್ಥಳೀಯ ಶಾಸಕರುಗಳ ನೇತೃತ್ವದಲ್ಲಿ ಬಸವಣ್ಣನವರ ಭಾವಚಿತ್ರವನ್ನು ಅನಾವರಣಗೊಳಿಸುವ ಕಾರ್ಯಕ್ರಮವನ್ನು ಆಯೋಜಿಸುವಂತೆ ಸೂಚಿಸಿದ್ದಾರೆ.
ಭಾವಚಿತ್ರದ ಅಡಿಬರಹದಲ್ಲಿ ವಿಶ್ವಗುರು ಬಸವಣ್ಣನವರು ಸಾಂಸ್ಕೃತಿಕ ನಾಯಕ ಎಂದು ಮುದ್ರಿಸಿ ಅಳವಡಿಸಬೇಕು. ಭಾವಚಿತ್ರದ ಪ್ರತಿಯನ್ನು ವೆಬ್‍ಸೈಟ್ http://kannadasiri.karnataka.gov.in ನಿಂದ ಡೌನ್‍ಲೋಡ್ ಮಾಡಿಕೊಂಡು. ಮುದ್ರಣ ಮಾಡಿಸಿ ಕಚೇರಿಗಳಲ್ಲಿ ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ. ಸುತ್ತೊಲೆಯಲ್ಲಿ ತಿಳಿಸಿದ್ದಾರೆ.