ಡಿವಿಜಿ ಸುದ್ದಿ, ದಾವಣಗೆರೆ: ರಾಜ್ಯದ ಕಂದಾಯ ಇಲಾಖೆಯ ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ಭರ್ತಿಗೆ ನೇರ ನೇಮಕಾತಿ ಮೂಲಕ ತುಂಬಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಒಟ್ಟು 69 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದವರಿಗೆ ನೇರ ನೇಮಕಾತಿ ಮೂಲಕ ತುಂಬಿಕೊಳ್ಳಲಾಗುವುದು. ಅರ್ಜಿ ಸಲ್ಲಿಸಲು ಫೆ. 15 ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್ ಲೈನ್ ಮುಖಾಂತರವೇ ಅರ್ಜಿ ಸಲ್ಲಿಸಬೇಕಿದ್ದು, http://shivamogga-va.kar.nic.in ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಎಸ್ ಸಿ, ಎಸ್ ಟಿ ಅಭ್ಯರ್ಥಿಗಳಿಗೆ 100 ಶುಲ್ಕ, ಇತರೆ ಅಭ್ಯರ್ಥಿಗಳಿಗೆ 200 ರೂಪಾಯಿ ಶುಲ್ಕ ನಿಗದಿ ಮಾಡಲಾಗಿದೆ.
ಒಟ್ಟು ಹುದ್ದೆಗಳು: 69
ಮೀಸಲಾತಿ ವಿವರ : ಸಾಮಾನ್ಯ–35, ಪ.ಜಾತಿ–10, ಪ.ಪಂಗಡ–02, ಹಿಂದುಳಿದ ವರ್ಗ–22
ವಿದ್ಯಾರ್ಹತೆ: ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ ದ್ವೀತಿಯ ಪಿಯುಸಿಯಲ್ಲಿ ಉತ್ತೀರ್ಣರಾಗಿರಬೇಕು. ಹಾಗೂ ಕಂಪ್ಯೂಟರ್ ಜ್ಞಾನವನ್ನು ಕಡ್ಡಾಯವಾಗಿ ಹೊಂದಿರಬೇಕು.
ವೇತನ ಶ್ರೇಣಿ: ₹ 21,400–₹ 42,000 ಶ್ರೇಣಿಯಲ್ಲಿ ವೇತನ ನೀಡಲಾಗುವುದು.
ವಯೋಮಿತಿ
1) ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಕನಿಷ್ಠ 24 ವರ್ಷ, ಗರಿಷ್ಠ 35 ವರ್ಷ
2) ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ ಕನಿಷ್ಠ 24 ವರ್ಷ, ಗರಿಷ್ಠ 38 ವರ್ಷ
3) ಪ.ಜಾ/ಪ.ಪಂ/ಪ್ರವರ್ಗ-1 ಅಭ್ಯರ್ಥಿಗಳಿಗೆ ಕನಿಷ್ಠ 24 ವರ್ಷ, ಗರಿಷ್ಠ 40 ವರ್ಷ
ಅರ್ಜಿ ಶುಲ್ಕ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ₹ 100, ಇತರೆ ಅಭ್ಯರ್ಥಿಗಳಿಗೆ ₹ 200.
ನೇಮಕಾತಿ ವಿಧಾನ: ದ್ವಿತೀಯ ಪಿಯುಸಿಯಲ್ಲಿ ಪಡೆದ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲಾಗುವುದು. ಮೀಸಲಾತಿ ಅನ್ವಯ ಅತಿಹೆಚ್ಚು ಅಂಕಗಳನ್ನು ಪಡೆದ ಅಭ್ಯರ್ಥಿಗಳನ್ನು ದಾಖಲೆಗಳ ಪರಿಶೀಲನೆಗೆ ಕರೆಯಲಾಗುವುದು.
ಅರ್ಜಿ ಸಲ್ಲಿಸುವ ವಿಧಾನ
ಅಭ್ಯರ್ಥಿಗಳು ಅರ್ಜಿಯನ್ನು ಆನ್‌ಲೈನ್ ಮೂಲಕವೇ ಸಲ್ಲಿಸಬೇಕು. ಇತರೆ ವಿಧಾನದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
ಅರ್ಜಿ ಸಲ್ಲಿಸುವ ಕಡೆ ದಿನಾಂಕ: 15-02-2020
ವೆಬ್‌ಸೈಟ್: http://shivamogga-va.kar.nic.in



