ನವದೆಹಲಿ: ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ದೆಹಲಿಯಲ್ಲಿರುವ ಪಕ್ಷದ ಕೇಂದ್ರ ಕಚೇರಿಯಲ್ಲಿ ಸೈನಾ ನೆಹ್ವಾಲ್ ಅವರಿಗೆ ಬಿಜೆಪ ಸೇರಿದರು.
ಈ ಸಂದರ್ಭದಲ್ಲಿ ಮಾತನಾಡಿದ 29 ವರ್ಷದ ಸೈನಾ, ನಾನು ನರೇಂದ್ರ ಮೋದಿ ಅವರಿಂದ ಪ್ರೇರಣೆಗೊಂಡು ಬಿಜೆಪಿಗೆ ಸೇರ್ಪಡೆಯಾಗಿದ್ದೇನೆ. ನಾನು ದೇಶಕ್ಕಾಗಿ ಹಲವು ಪದಕಗಳನ್ನು ಗೆದ್ದುಕೊಂಡಿದ್ದೇನೆ. ನಾನು ಕಠಿಣ ಪರಿಶ್ರಮ ಪಡುವ ವ್ಯಕ್ತಿಯಾಗಿದ್ದು, ಕಠಿಣ ಪರಿಶ್ರಮ ಪಡುವ ವ್ಯಕ್ತಿಗಳನ್ನು ನಾನು ಇಷ್ಟ ಪಡುತ್ತೇನೆ.
ಪ್ರಧಾನಿ ನರೇಂದ್ರ ಮೋದಿ ಕಠಿಣ ಪರಿಶ್ರಮ ಪಡುವ ವ್ಯಕ್ತಿ. ಅವರ ಜೊತೆ ಸೇರಿಕೊಂಡು ದೇಶಕ್ಕಾಗಿ ಕೆಲಸ ಮಾಡಬೇಕೆಂಬ ಆಸೆಯಿದೆ ಎಂದರು.
Delhi: Badminton Player Saina Nehwal joins BJP in the presence of Party's National General Secretary Arun Singh pic.twitter.com/uXPSJmDVcn
— ANI (@ANI) January 29, 2020
ದೆಹಲಿ ಚುನಾವಣೆ ಫೆ.9 ರಂದು ನಡೆಯಲಿದ್ದು, ಹರ್ಯಾಣ ಮೂಲದ ಸೈನಾ ನೆಹ್ವಾಲ್ ದೆಹಲಿ ಚುನಾವಣೆಯಲ್ಲಿ ಬಿಜೆಪಿ ಪರ ಚುನಾವಣಾ ಪ್ರಚಾರ ನಡೆಸುವ ಸಾಧ್ಯತೆಯಿದೆ.

ಸೈನಾ ಅವರಿಗೆ ರಾಜೀವ್ ಗಾಂಧಿ ಖೇಲ್ ರತ್ನ, ಅರ್ಜುನ ಪ್ರಶಸ್ತಿ, 2016 ರಲ್ಲಿ ಪದ್ಮ ಭೂಷಣ ಪ್ರಶಸ್ತಿಯನ್ನು ನೀಡಿ ಪುರಸ್ಕರಿಸಲಾಗಿತ್ತು. ಒಟ್ಟು 24 ಅಂತರಾಷ್ಟ್ರೀಯ ಪ್ರಶಸ್ತಿಗಳನ್ನು ಗೆದ್ದಿರುವ ಸೈನಾ ಲಂಡನ್ ಒಲಿಂಪಿಕ್ಸ್ ನಲ್ಲಿ ಕಂಚಿನ ಪದಕ ಗೆದ್ದಿದ್ದರು.




