ಬೆಂಗಳೂರು: ರಾಜ್ಯದ 106 ತಾಲೂಕುಗಳಲ್ಲಿ ಕೃಷಿ ಭಾಗ್ಯ ಯೋಜನೆ ಮರು ಜಾರಿ ಮಾಡಲಾಗಿದೆ. ಇದಕ್ಕೆ 100 ಕೋಟಿ ಅನುದಾನ ಮೀಸಲಿಡಲಾಗಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.
2023 -24ನೇ ಸಾಲಿನಲ್ಲಿ 100 ಕೋಟಿ ರೂಪಾಯಿ ಅನುದಾನದಲ್ಲಿ ಪ್ಯಾಕೇಜ್ ಮಾದರಿಯಲ್ಲಿ ಕೃಷಿ ಭಾಗ್ಯ ಯೋಜನೆ ಜಾರಿಗೊಳಿಸಲಾಗಿದೆ. ಕೃಷಿ ಹೊಂಡ, ಬದು, ಪಾಲಿಥೀನ್ ಹೊದಿಕೆ, ತಂತಿ ಬೇಲಿ, ಪಂಪ್ ಸೆಟ್, ಸೂಕ್ಷ್ಮ ನೀರಾವರಿ ಘಟಕಗಳು ಕೃಷಿ ಭಾಗ್ಯ ಯೋಜನೆಯ ಪ್ಯಾಕೇಜ್ ನಲ್ಲಿವೆ ಎಂದು ಸದನಕ್ಕೆ ಮಾಹಿತಿ ನೀಡಿದ್ದಾರೆ.
2023-24ನೇ ಸಾಲಿನ ಆಯವ್ಯಯದಲ್ಲಿ ಕೃಷಿ ಭಾಗ್ಯ ಯೋಜನೆಯನ್ನು ಮರು ಜಾರಿಗೊಳಿಸಲಾಗಿದ್ದು, ರಾಜ್ಯದ ಮಳೆಯಾಶ್ರಿತ ಕೃಷಿ ನೀತಿ, 2014ರನ್ವಯ ರಾಜ್ಯದ 24 ಜಿಲ್ಲೆ 106 ತಾಲೂಕುಗಳಲ್ಲಿ ಅನುಷ್ಠಾನ ಮಾಡಲು ಮಾರ್ಗಸೂಚಿ ಹಾಗೂ ಕ್ರಿಯಾ ಯೋಜನೆಯನ್ನು ಈಗಾಗಲೇ ಜಿಲ್ಲೆಗಳಿಗೆ ನೀಡಲಾಗಿದ್ದು, ಅದರಂತೆ ಕಾರ್ಯಕ್ರಮ ಅನುಷ್ಠಾನ ಮಾಡಲಾಗುತ್ತಿದೆ ಎಂದರು.
ಪ್ರಸಕ್ತ ಸಾಲಿನ ಆರ್ಥಿಕ ವರ್ಷಾಂತ್ಯಕ್ಕೆ ಕೇವಲ ಒಂದು ತಿಂಗಳು ಬಾಕಿ ಇದ್ದು, ಈ ಹಂತದಲ್ಲಿ ಯಾವುದೇ ಸೇರ್ಪಡೆ/ಬದಲಾವಣೆ ಹಾಗೂ ಅದರಂತಯೆ ಅನುಷ್ಠಾನ ಕಷ್ಟ ಸಾಧ್ಯವಾಗಿರುತ್ತದೆ ಉತ್ತರಿಸಿದರು.



