ದಾವಣಗೆರೆ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಬೆಂಗಳೂರು, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ಫೆ.26 ಮತ್ತು 27ರಂದು ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದೆ. 500ಕ್ಕೂ ಹೆಚ್ಚು ರಾಷ್ಟ್ರೀಯ, ಅಂತರರಾಷ್ಟ್ರೀಯ ಕಂಪನಿಗಳು ಭಾಗವಹಿಸಲಿದ್ದು, 600 ಸ್ಟಾಲ್ ಗಳಲ್ಲಿ ಉದ್ಯೋಗ ಮೇಳ ನಡೆಯಲಿದೆ.
ಉದ್ಯೋಗಾಕಾಂಕ್ಷಿಗಳು https://udyoga.skillconnet.kaushalkar.com ಲಿಂಕ್‍ನಲ್ಲಿ ನೋಂದಾಯಿಸಿಕೊಳ್ಳಬಹುದು. ಜಿಲ್ಲೆಯ ಹೆಚ್ಚಿನ ಸಂಖ್ಯೆಯಲ್ಲಿ ವಿಕಲಚೇತನ ಉದ್ಯೋಗಾಕಾಂಕ್ಷಿಗಳು ಈ ಬೃಹತ್ ಉದ್ಯೋಗ ಮೇಳದಲ್ಲಿ ಭಾಗವಹಿಸಬೇಕೆಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಡಾ.ಕೆ.ಕೆ. ಪ್ರಕಾಶ್ ತಿಳಿಸಿದ್ದಾರೆ.



