ಬೆಂಗಳೂರು: ರಾಜ್ಯ ಕೆಲ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಶೀತಗಾಳಿ ಬೀಸುತ್ತಿದ್ದು, ರಾಜ್ಯದ ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಬೆಂಗಳೂರು ನಗರ, ಗ್ರಾಮಾಂತರ, ಕೊಡಗು, ದಾವಣಗೆರೆ, ತುಮಕೂರು, ಚಿತ್ರದುರ್ಗದಲ್ಲಿ ಮುಂದಿನ ಎರಡು ದಿನಗಳಲ್ಲಿ ಅಲ್ಪ ಮಳೆಯಾಗಿಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಳ್ಳಾರಿ, ಗದಗ, ಕೊಪ್ಪಳ, ಯಾದಗಿರಿ, ರಾಮನಗರ, ಶಿವಮೊಗ್ಗ, ಉತ್ತರ ಕನ್ನಡ, ಕುಲಬುರಗಿ, ದಕ್ಷಿಣ ಕನ್ನಡ, ಹಾವೇರಿ, ಉಡುಪಿ, ಹಾವೇರಿ, ಬಾಗಲಕೋಟೆ, ಧಾರವಾಡ, ಬೆಳಗಾವಿ, ಬೀದರ್, ರಾಯಚೂರು, ಹಾಸನ, ವಿಜಯಪುರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಮಂಡ್ಯ, ಕೋಲಾರ, ಚಾಮರಾಜನಗರ, ಚಿಕ್ಕಮಗಳೂರು, ಮೈಸೂರು, ವಿಜಯನಗರದಲ್ಲಿ ಒಣಹವೆ ಇರಲಿದೆ.
ಬೆಳಗಾವಿ ವಿಮಾನ ನಿಲ್ದಾಣದಲ್ಲಿ 15.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬಹುತೇಕ ರಾಜ್ಯಗಳಲ್ಲಿ ಹಗಲಿನಲ್ಲಿ ತಾಪಮಾನ ಹೆಚ್ಚಿದೆ. ಆದರೆ ರಾತ್ರಿಯಲ್ಲಿ ಸ್ವಲ್ಪ ತಂಪು ಇರುತ್ತದೆ. ಆದರೆ ಎರಡು ದಿನಗಳಲ್ಲಿ ಅಂದರೆ ಪೆಬ್ರವರಿ 26-27 ರಂದು ಹವಾಮಾನದಲ್ಲಿ ಬದಲಾವಣೆಯ ಸಾಧ್ಯತೆಯನ್ನು ಐಎಂಡಿ ವ್ಯಕ್ತಪಡಿಸಿದೆ.



