ದಾವಣಗೆರೆ: ಜಿಲ್ಲಾ ಅಮೆಚೂರ್‌ಕಬಡ್ಡಿ ಸಂಸ್ಥೆ ಹಾಗೂ ಜನಪ್ರಿಯ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಮಟ್ಟದ ಹೊನಲು-ಬೆಳಕಿನ ಕಬಡ್ಡಿ ಪಂದ್ಯಾವಳಿ ಮಾ. 28ರಿಂದ ಮಾ.31 ರವರೆಗೆ ಪ್ರತಿದಿನ ಸಂಜೆ 5ರಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಪಂದ್ಯಾವಳಿಯಲ್ಲಿ
ಭಾಗವಹಿಸುವ 8 ತಂಡಗಳ ಆಯ್ಕೆ ಪ್ರಕ್ರಿಯೆ (ಹರಾಜು)ಫೆ.29ರಂದು ಬೆಳಿಗ್ಗೆ 9.30ಕ್ಕೆ ನಗರದ ಎಸ್.ಎಸ್. ಬಡಾವಣೆಯಲ್ಲಿರುವ ನೇತಾಜಿ ಸುಭಾಷ್ ಚಂದ್ರ ಬೋಸ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ.
ಪಂದ್ಯಾವಳಿಯಲ್ಲಿ ಒಟ್ಟು 8 ತಂಡಗಳು ಭಾಗವಹಿಸುತ್ತಿದ್ದು, ಲೀಗ್ ಕಮ್ ನಾಕೌಟ್ ಮಾದರಿಯಲ್ಲಿ ಪಂದ್ಯಗಳ ಆಡಿಸಲಾಗುವುದು. ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದ ತಂಡಕ್ಕೆ 1 ಲಕ್ಷ, ದ್ವಿತೀಯ ಸ್ಥಾನ ಪಡೆದ ತಂಡಕ್ಕೆ 50 ಸಾವಿರ ಹಾಗೂ ತೃತೀಯ ಮತ್ತು ಚತುರ್ಥ ಸ್ಥಾನ ಪಡೆದ ತಂಡಗಳಿಗೆ ಕ್ರಮವಾಗಿ 25 ಸಾವಿರ ನಗದು ಬಹುಮಾನ ಜೊತೆಗೆ ಆಕರ್ಷಕ ಟ್ರೋಫಿಗಳ ನೀಡಲಾಗುವುದು. ಈ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಕ್ರೀಡಾಪಟುಗಳಿಗೆ ಸರ್ವೋತ್ತಮ ಆಟಗಾರ, ಉತ್ತಮ ದಾಳಿಗಾರ, ಉತ್ತಮ ಹಿಡಿತಗಾರ ಇವರಿಗೆ ವಿಶೇಷ
ಬಹುಮಾನಗಳ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ ರಾಕೇಶ್ (ಮೊ: 94488 35907, 97415 04529)ರನ್ನು ಸಂಪರ್ಕಿಸಬಹುದು.



