ಬೆಂಗಳೂರು: 7ನೆ ವೇತನ ಆಯೋಗ ಜಾರಿ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಒಂದು ವೇಳೆ 7ನೇ ವೇತನ ಆಯೋಗ ಜಾರಿ ಮಾಡುವ ಬೇಡಿಕೆ ಈಡೇರಿಸದಿದ್ರೆ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಎಚ್ಚರಿಸಿದರು.
ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ರಾಜ್ಯ ಸರ್ಕಾರಿ ನೌಕರರ ಸಮ್ಮೇಳನದಲ್ಲಿ ಮುಖ್ಯಮಂತ್ರಿಗಳ ಭಾಷಣದ ನಂತದ ಮಾತನಾಡಿದ ಅವರು, ನೌಕರರು ತಾಳ್ಮೆ ಕಳೆದುಕೊಳ್ಳುವುದು ಬೇಡ. ಸರ್ಕಾರ ನೀಡಿರುವ ಗಡುವಿನ ವರೆಗೆ ಕಾಯೋಣ ಎಂದು ಎಲ್ಲರಿಗೂ ತಿಳಿಸಿದರು.
ಸರ್ಕಾರಿ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಿ ನಡೆಸುತ್ತಿರುವ ಹೋರಾಟಕ್ಕೆ ಸಮ್ಮೇಳನ ಮೂಲಕ ಮುನ್ನುಡಿ ಬರೆಯಲಾಗಿದೆ. ಸರ್ಕಾರಿ ನೌಕರರ ಹೋರಾಟಗಳಿಗೆ ಇಲ್ಲಿಯವರೆಗೂ ಸೋಲಾಗಿಲ್ಲ. ನಮ್ಮ ಬೇಡಿಕೆಗಳನ್ನು ಈಡೇರಿಸುವ ಭರವಸೆಯನ್ನು ಸಿಎಂ ನೀಡಿದ್ದಾರೆ.
ಒಂದು ವೇಳೆ ಬೇಡಿಕೆ ಈಡೇರಿಸದಿದ್ದರೆ, ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಹೋರಾಟ ನಡೆಸಲಾಗುವುದು. ಅದಕ್ಕೂ ಬಗ್ಗದಿದ್ರೆ ಮುಷ್ಕರ ಹೂಡಲಾಗುತ್ತದೆ ಎಂದರು



