ಬೆಂಗಳೂರು: ರಾಜ್ಯದ ಕಂದಾಯ ಇಲಾಖೆಯ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಖಾಲಿ ಇರುವ 364 ಭೂಮಾಪಕರ ಹುದ್ದೆ ಭರ್ತಿಗೆ ಕರ್ನಾಟಕ ಲೋಕಸೇವಾ ಆಯೋಗ ( KPSC) ಅಧಿಸೂಚನೆ ಹೊರಡಿಸಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದೆ.
ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಖಾಲಿ ಇರುವ 100 ಭೂಮಾಪಕರ ಗ್ರೂಪ್-ಸಿ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಿರುವುದಾಗಿ ತಿಳಿಸಿದೆ.ಉಳಿಕೆ ಮೂಲ ವೃಂದ – 264 ಹುದ್ದೆಗಳು ಸೇರಿ ಒಟ್ಟು 364 ಭೂಮಾಪಕರ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.
- ಪ್ರಮುಖ ಅಂಶ
- ಉಳಿಕೆ ಮೂಲ ವೃಂದ – 264 ಹುದ್ದೆಗಳು
- ಹೈದರಾಬಾದ್-ಕರ್ನಾಟಕ ಸ್ಥಳೀಯ ವೃಂದ – 100 ಹುದ್ದೆಗಳು
- ವೇತನ ಶ್ರೇಣಿ – ರೂ.23,500 ರಿಂದ ರೂ.47,650
- ಪ್ರಮುಖ ದಿನಾಂಕ: 11-03-2024ರಿಂದ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭ
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10-04-2024
- ತಾತ್ಕಾಲಿಕ ಸ್ಪರ್ಧಾತ್ಮಕ ಪರೀಕ್ಷೆಯು ಕನ್ನಡ ಭಾಷಾ ಪರೀಕ್ಷೆ ದಿನಾಂಕ 06-07-2024
- ಸ್ಪರ್ಧಾತ್ಮಕ ಪರೀಕ್ಷೆಯು ದಿನಾಂಕ 07-07-2024ರಂದು
ಶೈಕ್ಷಣಿಕ ವಿದ್ಯಾರ್ಹತೆ : ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಕಾನೂನು ರೀತಿ ಸ್ಥಾಪಿಸಲಾದಂತ ಯಾವುದೇ ವಿವಿಯಿಂದ ಬಿಇ (ಸಿವಿಲ್) ಅಥವಾ ಬಿಟೆಕ್(ಸಿವಿಲ್) ಅಥವಾ ಸಿವಿಲ್ ಇಂಜಿನಿಯರಿಂಗ್ ಡಿಪ್ಲೋದಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಪಿಯುಸಿ ಅಥವಾ ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ ಜರುಗಿಸುವ 12ನೇ ತರಗತಿ ಇವುಗಳಲ್ಲಿ ವಿಜ್ಞಾನ ವಿಷಯದಲ್ಲಿ ಪಡೆದು ಗಮಿತ ವಿಷಯದಲ್ಲಿ ಶೇ.60ರಷ್ಟು ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು ಅಥವಾ ಕರ್ನಾಟಕ ರಾಜ್ಯ ಸರ್ಕಾರದ ವೃತ್ತಿ ಶಿಕ್ಷಣ ಇಲಾಖೆ ನಡೆಸುವ ಲ್ಯಾಂಡರ್ ಅಂಡ್ ಸಿಟಿ ಸರ್ವೆಯ ಪದವಿ ಪೂರ್ವ ಡಿಪ್ಲೋಮಾದಲ್ಲಿ ಉತ್ತೀರ್ಣರಾಗಿರಬೇಕು.
ಅರ್ಜಿ ಸಲ್ಲಿಕೆ:https://kpsconline.karnataka.gov.in ಗೆ ಭೇಟಿ ನೀಡಿ ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಬಹುದಾಗಿದೆ.
ವಯೋಮಿತಿ: ಸಾಮಾನ್ಯ ವರ್ಗದವರಿಗೆ 35 ವರ್ಷಗಳು. ಪ್ರವರ್ಗ-2ಎ, 2ಬಿ, 3ಎ, 3ಬಿ ವರ್ಗದವರಿಗೆ 38 ವರ್ಷಗಳು. ಎಸ್ಸಿ, ಎಸ್ಟಿ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷಗಳು.
ಅರ್ಜಿ ಶುಲ್ಕ: ಸಾಮಾನ್ಯ ವರ್ಗದವರಿಗೆ ರೂ.600. ಪ್ರವರ್ಗ-2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ರೂ.300. ಮಾಜಿ ಸೈನಿಕರಿಗೆ ರೂ.50. ಎಸ್ಸಿ, ಎಸ್ಟಿ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.



