ಡಿವಿಜಿ. ಸುದ್ದಿ, ದಾವಣಗೆರೆ: ಜಿಲ್ಲಾಡಳಿತ, ಶ್ರೀ ಮಡಿವಾಳ ಮಾಚಿದೇವ ಸಂಘ, ಮಡಿಕಟ್ಟೆ ಸಮಿತಿ, ಮಡಿವಾಳ ಮಾಚೇದೇವ ಮಹಿಳಾ ಸಂಘ ಹಾಗೂ ಸಚಿತಾ ಸಮಾಜ ಸಹಯೋಗದೊಂದಿಗೆ ಫೆ. 1 ರಂದು ವಿನೋಬನಗರದ ಶ್ರೀ ಮಡಿವಾಳ ಮಾಚಿದೇವ ಸಮುದಾಯ ಭವನದಲ್ಲಿ ಶ್ರೀ ಮಡಿವಾಳ ಮಾಚಿದೇವ ಮತ್ತು ಶ್ರೀ ಸವಿತಾ ಮಹರ್ಷಿ ಜಯಂತೋತ್ಸವ ಕಾರ್ಯಕ್ರಮ ಆಯೊಜಿಸಿದೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಡಿವಾಳ ಸಂಘದ ಜಿಲ್ಲಾಧ್ಯಕ್ಷ ಎಂ. ನಾಗೇಂದ್ರಪ್ಪ, ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಮಹಾಂತೆಶ್ ಬೀಳಗಿ ಉದ್ಘಾಟಿಸಲಿದ್ದು, ಸಮಾಜದ ಜಿಲ್ಲಾಧ್ಯಕ್ಷ ಎಂ. ನಾಗೇಂದ್ರಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕನ್ನಡ ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ, ಸವಿತಾ ಸಮಾಜದ ಜಿಲ್ಲಾಧ್ಯಕ್ಷ ಬಿ. ಬಾಲರಾಜ್, ತಾಲ್ಲೂಕು ಘಟಕದ ಅಧ್ಯಕ್ಷ ಎನ್. ರಂಗಸ್ವಾಮಿ, ಮಡಿವಾಳ ಸಮಾಜದ ಜಿಲ್ಲಾ ಕಾರ್ಯದರ್ಶಿ ಓಂಕಾರಪ್ಪ, ಕಾರ್ಯಾಧ್ಯಕ್ಷ ಎಚ್.ಜಿ. ಉಮೇಶ್ ಆವರಗೆರೆ ಮಡಿಕಟ್ಟೆ ಅಧ್ಯಕ್ಷ ಅಡಿವೆಪ್ಪ, ಮಹಿಳಾ ಸಂಘದ ಅಧ್ಯಕ್ಷೆ ನಾಗಮ್ಮ ಸೇರಿದಂತೆ ಅನೇಕ ಗಣ್ಯ ಭಾಗಿಯಾಗಲಿದ್ದಾರೆ.
ಮಡಿವಾಳ ಮಾಚಿದೇವರ ಕುರಿತು ಎಂಎಸ್ ಬಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಅನಿತಾ ಜಿ ಉಪನ್ಯಾಸ ನೀಡಲಿದ್ದಾರೆ. ಅಂತರರಾಷ್ಟ್ರೀಯ ಯೋಗಪಟು ಪರಶುರಾಮ್ , ಪರಿಸರವಾದಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವೀರಾಚಾರಿ , ಜಿಮ್ನಾಸ್ಟಿಕ್ ಅಂತರಾಷ್ಟ್ರೀಯ ಪಟು ಆದ್ವಿಕ್ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಲಾಗುವುದು ಎಂದರು.
ಸವಿತಾ ಸಮಾಜದ ಎನ್. ರಂಗಸ್ವಾಮಿ ಮಾತನಾಡಿ, ಅತ್ಯಂತ ಹಿಂದುಳಿದ ಮಡಿವಾಳ ಮತ್ತು ಸವಿತಾ ಸಮಾಜ ಒಂದೇ ವೇದಿಕೆಯಲ್ಲಿ ಕಾರ್ಯಕ್ರಮ ಆಯೋಜಿಸಿವೆ. ರಾಜ್ಯದಲ್ಲಿ ಮೊದಲ ಸಲ ಇಂತಹ ಕಾರ್ಯಕ್ರಮ ನಡೆಯುತ್ತಿದೆ ಎಂದರು.



