ಬೆಂಗಳೂರು: ಕೇಂದ್ರ ಸರ್ಕಾರಿ ನೌಕರರಿಗೆ ಶೇ.4ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿ ಈಗಾಗಲೇ ಆದೇಶ ಮಾಡಿತ್ತು. ಇದೀಗ ರಾಜ್ಯ ಸರ್ಕಾರಿ ನೌಕರರಿಗೂ ಗುಡ್ ನ್ಯೂಸ್ ಸಿಕ್ಕಿದ್ದು, ತುಟ್ಟಿಭತ್ಯೆಯನ್ನು ಶೇ.38.75ರಿಂದ ಶೇ.42.5ರಷ್ಟು ಹೆಚ್ಚಳ ಮಾಡಿ ಸರ್ಕಾರ ಆದೇಶಿಸಿದೆ.
ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು ಶೇ.38.75ರಿಂದ ಶೇ.42.5ಕ್ಕೆ ಪರಿಷ್ಕರಿಸಲು ಅನುಮೋದನೆ ನೀಡಲಾಗಿದೆ.ಆರ್ಥಿಕ ಇಲಾಖೆಯಿಂದ ಅಧಿಕೃತ ಆದೇಶ ಹೊರಡಿಸಲಾಗಿದ್ದು, 2018ರ ಪರಿಷ್ಕೃತ ತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಜನವರಿ 2024 ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇಕಡ 38.75 ರಿಂದ ಶೇಕಡ 42.5 ಗೆ ಪರಿಷ್ಕರಿಸಿ ಮಂಜೂರು ಮಾಡಲು ಸರ್ಕಾರ ಆದೇಶಿಸಿದೆ.



