ಡಿವಿಜಿ ಸುದ್ದಿ, ಕಲಬುರಗಿ: ವಾಲ್ಮೀಕಿ ಸಮುದಾಯಕ್ಕೆ ಉಪ ಮುಖ್ಯಮಂತ್ರಿ ಹುದ್ದೆ ನೀಡಬೇಕೆಂದು ಸಮಾಜದ ಜನರ ಮತ್ತು ವಾಲ್ಮೀಕಿ ಶ್ರೀಗಳ ಆಶಯವಾಗಿದೆ. ಆದರೆ, ಪಕ್ಷ ಯಾವುದೇ ನಿರ್ಧಾರ ತಗೆದುಕೊಂಡರೂ, ಪಕ್ಷದ ನಿರ್ಧಾರಕ್ಕೆ ಬದ್ಧನಾಗಿದ್ದೇನೆ ಎಂದು ಸಚಿವ ಶ್ರೀರಾಮುಲು ಹೇಳಿದರು.
ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಂಪುಟ ವಿಸ್ತರಣೆ ವಿಚಾರವಾಗಿ ದೆಹಲಿಗೆ ಹೋಗಿದ್ದಾರೆ. ಫೆಬ್ರವರಿ ಮೊದಲವಾರ ಸಂಪುಟ ವಿಸ್ತರಣೆ ಆಗುವ ಸಾಧ್ಯತೆ ಇದೆ. ಸಮಾಜಕ್ಕೆ ಉಪ ಮುಖ್ಯಮಂತ್ರಿ ಸ್ಥಾನ ಬಗ್ಗೆ ಪಕ್ಷ ತೀರ್ಮಾನ ಕೈಗೊಳ್ಳುತ್ತದೆ. ಪಕ್ಷದ ತೀರ್ಮಾನಕ್ಕೆ ನಾವು ಬದ್ಧನಾಗಿರುತ್ತೇನೆ ಎಂದರು.
ಎರಡು ಸಾವಿರ ವೈದ್ಯರ ನೇಮಕ
ನೇರ ನೇಮಕಾತಿ ಮೂಲಕ ಎರಡು ಸಾವಿರಕ್ಕೂ ಹೆಚ್ಚು ವೈದ್ಯರ ನೇಮಿಸಿಕೊಳ್ಳಲು ಕ್ಯಾಬಿನೆಟ್‌ನಲ್ಲಿ ಒಪ್ಪಿಗೆ ನೀಡಲಾಗಿದೆ. ಅತಿ ಶ್ರೀಘ್ರದಲ್ಲಿಯೇ ವೈದ್ಯರ ನೇಮಕವಾಗಲಿದೆ ಎಂದು ಸಚಿವ ಶ್ರೀರಾಮುಲು ಹೇಳಿದರು.