ದಾವಣಗೆರೆ: ಮಾರ್ಚ್ 27 ರಿಂದ ಏಪ್ರಿಲ್ 1 ರವರೆಗೆ ದೆಹಲಿಯಲ್ಲಿ ನಡೆಯಲಿರುವ 56 ನೇ ರಾಷ್ಟ್ರೀಯ ಪುರುಷರ ಮತ್ತು ಮಹಿಳೆಯರ ಖೋ-ಖೋ ಚಾಂಪಿಯನ್‌ಷಿಪ್‌ನಲ್ಲಿ ಭಾಗವಹಿಸಲಿರುವ ಕರ್ನಾಟಕ ರಾಜ್ಯ ಪುರುಷರ ತಂಡಕ್ಕೆ ದಾವಣಗೆರೆ ಕ್ರೀಡಾ ವಸತಿ ನಿಲಯದ ಖೋ-ಖೋ ಕ್ರೀಡಾಪಟುಗಳಾದ ಲಕ್ಷ್ಮಣ ವಿ. ಕೆ ಮತ್ತು ಮಹಮ್ಮದ್ ತಾಸೀನ್ ಇವರುಗಳ ಆಯ್ಕೆಯಾಗಿದ್ದಾರೆ.
ಕ್ರೀಡಾಕೂಟದಲ್ಲಿ ಭಾಗವಹಿಸುವ ರಾಜ್ಯ ತಂಡ ಉತ್ತಮ ಸಾಧನೆ ಮಾಡಲೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ.ಆರ್.ಜಯಲಕ್ಷ್ಮೀ ಬಾಯಿ, ಇಲಾಖೆಯ ಅಧೀಕ್ಷಕರಾದ ಅರ್ಪಿತಕೆ.ಜಿ. ಇಲಾಖೆಯ ತರಬೇತುದಾರರು ಹಾಗೂ ಸಿಬ್ಬಂದಿ ವರ್ಗದವರು ಶುಭಕೋರಿದ್ದಾರೆ.



