ದಾವಣಗೆರೆ: ಭದ್ರಾವತಿಯ ಲಕ್ಕವಳ್ಳಿಯ ಭದ್ರಾ ಜಲಾಶಯದಿಂದ ತುಂಗಾಭದ್ರಾ ನದಿ ಪಾತ್ರದ ಗ್ರಾಮೀಣ ಮತ್ತು ಪಟ್ಟಣದ ಪ್ರದೇಶಗಳ ಕುಡಿಯುವ ನೀರಿನ ಉದ್ದೇಶಕ್ಕಾಗಿ ಪ್ರತಿದಿನ ಮೂರು ಸಾವಿರ ಕ್ಯೂಸೆಕ್ ಹರಿಸಲು ನಿರ್ಧಾರಿಸಲಾಗಿದೆ. ಪ್ರಾದೇಶಿಕ ಆಯುಕ್ತರ ಆದೇಶದಂತೆ ನದಿಗೆ ನೀರು ಬಿಡಲಾಗುತ್ತಿದೆ. ಮಾರ್ಚ್ 29ರ ರಾತ್ರಿಯಿಂದ ಏಪ್ರಿಲ್ 5ರವರೆಗೆ ಪ್ರತಿದಿನ ಮೂರು ಸಾವಿರ ಕ್ಯೂಸೆಕ್ ನೀರು ಹರಿಸಲು ತೀರ್ಮಾನಿಸಲಾಗಿದೆ.
ಕುಡಿಯು ನೀರಿಗೆ ಮೊದಲ ಪ್ರಾಶಸ್ತ್ಯ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ನದಿಗೆ ನೀರು ಹರಿಸುವುದು ಅನಿವಾರ್ಯವಾಗಿದೆ ಎಂದು ಭದ್ರಾ ಜಲಾಶಯದ ನಿರ್ವಹಣೆ ನೋಡಿಕೊಳ್ಳುತ್ತಿರುವ ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.
ಮಾರ್ಚ್ 29ರ ರಾತ್ರಿಯಿಂದ ಏಪ್ರಿಲ್ 6ರ ರಾತ್ರಿಯವರೆಗೆ 7 ದಿನಗಳ ಕಾಲ ನಿತ್ಯ 3 ಸಾವಿರ ಕ್ಯುಸೆಕ್ ಹಾಗೂ ಏಪ್ರಿಲ್ 6ರಂದು 2200 ಕ್ಯುಸೆಕ್ ನದಿಗೆ ಹರಿಸಲಾಗುವುದು.ಈ ಎಂಟು ದಿನಗಳ ಅವಧಿಯಲ್ಲಿ 23,200 ಕ್ಯೂಸೆಕ್ (2 ಟಿಎಂಸಿ) ನೀರು ಹರಿಸಲಾಗುತ್ತದೆ. ಈ ಅವಧಿಯಲ್ಲಿ ತುಂಗಾಭದ್ರಾ ನದಿಯಲ್ಲಿ ಅನಧಿಕೃತ ಪಂಪ್ ಸೆಟ್ ತೆರವಿಗೆ ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಪಂಪ್ ಸೆಟ್ ಅಳವಡಿಸಿದ್ದರೆ ಕೂಡಲೇ ತೆಗೆಯಬೇಕು. ಇಲ್ಲದಿದ್ದರೆ ಅಧಿಕಾರಿಗಳು ತೆರವುಗೊಳಿಸಲಿದ್ದಾರೆ ಎಂದು ಕರ್ನಾಟಕ ನೀರಾವರಿ ನಿಗಮದ ಪ್ರಕಟಣೆಯಲ್ಲಿ ತಿಳಿಸಿದೆ.



