ಡಿವಿಜಿ ಸುದ್ದಿ, ದಾವಣಗೆರೆ: ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಮಹಾತ್ಮ ಗಾಂಧೀಜಿ ಅವರು 72 ನೇ ಪುಣ್ಯ ತಿಥಿ ಅಂಗವಾಗಿ ಮಹಾತ್ಮ ಗಾಂಧೀಜಿ ಆದಿಕರ್ನಾಟಕ ವಿದ್ಯಾಭಿವೃದ್ಧಿ ಸಂಸ್ಥೆಯ ಆವರಣದಲ್ಲಿ ಗಾಂಧಿಜಿ ಪುತ್ಥಳಿ ಮುಂದೆ ಕ್ಯಾಂಡಲ್ ಬೆಳಗಿಸಿ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು.
ಮಹಾತ್ಮ ಗಾಂಧೀಜಿಯವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಕ್ಯಾಂಡಲ್ ಹಿಡಿದು ಒಂದು ನಿಮಿಷಗಳ ಕಾಲ ಮೌನಾಚರಣೆ ಮಾಡುವುದರ ಮೂಲಕ ಗೌರವಪೂರ್ವಕ ನಮನ ಸಲ್ಲಿಸಲಾಯಿತು. ಮಹಾತ್ಮ ಗಾಂಧೀಜಿಯವರು ನಗರದ ಮಹಾತ್ಮ ಗಾಂಧೀಜಿ ಆದಿಕರ್ನಾಟಕ ವಿದ್ಯಾಭಿವೃದ್ಧಿ ಸಂಸ್ಥೆ ಸ್ಥಾಪನೆಗೆ ಅಡಿಗಲ್ಲು ಹಾಕಿದ್ದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ಸಿನ ಮಾಧ್ಯಮ ವಕ್ತಾರ ಜೆ.ಜೆ. ಮೈನುದ್ದೀನ್, ಆದಿಕರ್ನಾಟಕ ವಿದ್ಯಾಭಿವೃದ್ಧಿ ಸಂಸ್ಥೆಯ ನಿರ್ದೇಶಕರು ಬಿ.ಕೆ ಉಚ್ಚೆಂಗೆಪ್ಪ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಮಹಮ್ಮದ್ ಸಾದಿಕ್, ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಸಾಗರ್.ಎಲ್.ಹಚ್ , ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ಸಿನ ಅಧ್ಯಕ್ಷ ಚಂದ್ರು, ಉತ್ತರ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ಸಿನ ಕಾರ್ಯದರ್ಶಿ ಗಜೇಂದ್ರ ಜಗನ್ನಾಥ್, ಪ್ರಶಾಂತ್ ಎಸ್ , ಗಿರೀಶ್ ಸಾತಲ, ಹರೀಶ್ ಸೇರಿದಂತೆ ವಿದ್ಯಾರ್ಥಿಗಳು ಭಾಗಿಯಾಗಿದ್ದರು.



