ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್‍ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್ ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.
ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್‍ಸೆಟ್‍ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.



