ದಾವಣಗೆರೆ: ಖೇಲೋ ಇಂಡಿಯಾ ರಾಜ್ಯ ಉತ್ಕೃಷ್ಟತಾ ಕೇಂದ್ರ, ವಿದ್ಯಾನಗರ ಬೆಂಗಳೂರು ಇಲ್ಲಿನ ತರಬೇತಿ ಕೇಂದ್ರಕ್ಕೆ ಅಥ್ಲೆಟಿಕ್ಸ್ ಹಾಗೂ ಈಜು ಕ್ರೀಡೆಗಳಲ್ಲಿ ಪ್ರತಿಭಾನ್ವಿತರ ಆಯ್ಕೆ ಮಾಡುವ ಸಲುವಾಗಿ ಜಯ ಪ್ರಕಾಶ್ ನಾರಾಯಣ ರಾಷ್ಟ್ರೀಯ ಯುವ ತರಬೇತಿ ಕೇಂದ್ರ ಕ್ರೀಡಾ ಶಾಲೆ, ವಿದ್ಯಾನಗರ, ಬೆಂಗಳೂರು ಇಲ್ಲಿ ಏ.15, 16 ರಂದು ಆಯ್ಕೆ ಪ್ರಕ್ರಿಯೆಯನ್ನು ನಡೆಸಲಾಗುವುದು.
ಆಸಕ್ತ ಅರ್ಹ ಕ್ರೀಡಾಪಟುಗಳು ಆಯ್ಕೆಯಲ್ಲಿ ಭಾಗವಹಿಸಬಹುದು. ಹೆಚ್ಚಿನ ವಿವರಗಳಿಗೆ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ದಾವಣಗೆರೆ ದೂ.ಸಂ: 08192-237480 ಸಂಪರ್ಕಿಸಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಜಯಲಕ್ಷ್ಮೀಬಾಯಿ ತಿಳಿಸಿದ್ದಾರೆ.



