ಬೆಂಗಳೂರು: ಬಿರು ಬಿಸಿಲಿನಿಂದ ಕಂಗೆಟ್ಟಿದ್ದ ರಾಜ್ಯದ ಜನತೆಗೆ ಗುಡ್ ನ್ಯೂಸ್, ಇಂದಿನಿಂದ ರಾಜ್ಯದ ಹಲವೆಡೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಏಪ್ರಿಲ್ 12 ರಿಂದ ಏ 14 ರವರೆಗೆ ಮತ್ತು 17 ಮತ್ತು 18 ರಂದು ರಾಜ್ಯದಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಬೆಂಗಳೂರಲ್ಲಿ ಕೂಡ ನಾಳೆಯಿಂದ ಮಳೆಯಾಗುವ ಸಾಧ್ಯತೆಯಿದೆ. ಏ.12,15,16 ರಂದು ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭಾಗಗಳಲ್ಲಿ ಜೋರು ಮಳೆಯಾಗಲಿದೆ.
ಬೀದರ್, ಕಲಬುರ್ಗಿ, ವಿಜಯಪುರ, ಕೊಪ್ಪಳ, ರಾಯಚೂರು, ವಿಜಯಪುರ, ಗದಗ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಹಾವೇರಿ , ಕೊಡಗು, ಚಿಕ್ಕಮಗಳೂರು. ಮೈಸೂರು. ಮಂಡ್ಯ ಮತ್ತು ಹಾಸನ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.