ದಾವಣಗೆರೆ: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗೆಲ್ಲಾ ಬರಗಾಲ ಬರುತ್ತದೆ. ಈ ಬಾರಿಯೂ ರಾಜ್ಯದಲ್ಲಿ ಬರಗಾಲ ಬಂದಿದ್ದು, ಕುಡಿವ ನೀರಿಗೂ ಹಾಹಾಕಾರ ಉಂಟಾಗಿದೆ. ಕೇಂದ್ರ ಸರ್ಕಾರ ಕಿಸಾನ್ ಸನ್ಮಾನ್ ಯೋಜನೆಯಲ್ಲಿ ರೈತರ ಖಾತೆಗೆ 6 ಸಾವಿರ ಹಾಕಿದರೆ, ಹಿಂದಿನ ಬಿಜೆಪಿ ಸರ್ಕಾರ 4 ಸಾವಿರ ಸೇರಿ ಒಟ್ಟು 10 ಸಾವಿರ ಕೊಡುತ್ತಿದ್ದೇವು. ಈಗ ಕಾಂಗ್ರೆಸ್ ಸರ್ಕಾರ 4 ಸಾವಿರ ರೂಪಾಯಿ ನಿಲ್ಲಿಸಿದೆ. ಕೇಂದ್ರದ 6 ಸಾವಿರ ಮಾತ್ರ ರೈತರಿಗೆ ಸಿಗುತ್ತಿದೆ. ಕಾಂಗ್ರೆಸ್ ಸರ್ಕಾರ ರೈತ ವಿರೋಧಿ ಸರ್ಕಾರ ಎಂದು ಸಂಸದ ಡಾ. ಜಿ. ಎಂ. ಸಿದ್ದೇಶ್ವರ್ ಕಿಡಿಕಾರಿದರು.
ತ್ಯಾವಣಗಿ ಗ್ರಾಮದಲ್ಲಿ ಆಯೋಜಿಸಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿ, ಪ್ರಧಾನ ಮಂತ್ರಿ ಮೋದಿ ಅವರು 10 ವರ್ಷದಲ್ಲಿ ಜಿಲ್ಲೆಗೆ ಕೋಟ್ಯಂತರ ರೂಪಾಯಿ ಅನುದಾನ ನೀಡಿದ್ದಾರೆ. ನಾನು 20 ವರ್ಷದಲ್ಲಿ ಜಿಲ್ಲೆಗೆ ಸಾಕಷ್ಟುಅಭಿವೃದ್ಧಿ ಕೆಲಸ ಮಾಡಿದ್ಧೇನೆ. ಹೀಗಾಗಿ ಈ ಬಾರಿ ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ತಮ್ಮ ಶ್ರೀಮತಿ ಗೆಲ್ಲುವುದು ನಿಶ್ಚಿತ. ಈಗಾಗಲೇ ಜನ ತೀರ್ಮಾನಿಸಿದ್ದಾರೆ. ಇನ್ನೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ದಾವಣಗೆರೆ ನಗರ ಬಿಟ್ಟು ಗ್ರಾಮೀಣ ಭಾಗಕ್ಕೆ ಹೋಗಿಲ್ಲ. ಈಗ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಿಸಿದ್ರೆ ಅಭಿವೃದ್ಧಿ ಮಾಡುತ್ತೇನೆ ಎನ್ನುವವರು 10 ವರ್ಷ ಸಚಿವರಾಗಿ ಏನು ಮಾಡಿದರು.
ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುರುಗೇಶ್ ನಿರಾಣಿ, ಎಂಎಲ್ಸಿ ರವಿಕುಮಾರ್, ಮಾಜಿ ಶಾಸಕರಾದ ಮಾಡಾಳ್ ವಿರೂಪಾಕ್ಷಪ್ಪ, ಪ್ರೊ.ಲಿಂಗಣ್ಣ, ಬಸವರಾಜ್ ನಾಯ್, ಎಸ್.ವಿ.ರಾಮಚಂದ್ರ, ಮಾಜಿ ಶಾಸಕ ಎಚ್.ಎಸ್.ಶಿವಶಂಕರ್ , ಎಚ್.ಪಿ.ರಾಜೇಶ್, ಮಾಜಿ ಶಾಸಕ ಮಹಿಮಾ ಪಟೇಲ್, ದೂಡಾ ಮಾಜಿ ಅಧ್ಯಕ್ಷ ಯಶವಂತರಾಜ್ ಜಾಧವ್, ಬಿಜೆಪಿ ಜಿಲ್ಲಾಧ್ಯಕ್ಷ ಎನ್.ರಾಜಶೇಖರ್, ಜೆಡಿಎಸ್ ಮುಖಂಡ ತೇಜಸ್ವಿ ಪಟೇಲ್, , ಮಾಡಳ್ ಮಲ್ಲಿಕಾರ್ಜುನ್, ದೇವೇಂದ್ರಪ್ಪ, ಶಿವಾನಂದಮೂರ್ತಿ, ಜಿ.ಎಸ್. ಶ್ಯಾಮ್, ಜೆಡಿಎಸ್ ಜಿಲ್ಲಾಧ್ಯಕ್ಷ ಚಿದಾನಂದಪ್ಪ ಮತ್ತಿತರರು ಇದ್ದರು.