ದಾವಣಗೆರೆ: ಹೊಂಚು ಹಾಕಿ ಮನೆ ಕಳ್ಳತನ ಮಾಡುತ್ತಿದ್ದ ಅಂತರ್ ಜಿಲ್ಲಾ ಆರೋಪಿಯನ್ನು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ 5,51,000 ರೂ. ಬೆಲೆಯ 90.4 ಗ್ರಾಂ ತೂಕದ ಬಂಗಾರದ ಆಭರಣ ಹಾಗೂ 4 ಸಾವಿರ ರೂ ನಗದು ಹಣವನ್ನು ವಶ ಪಡಿಸಿಕೊಳ್ಳಲಾಗಿದೆ.
ಕೆಟಿಜೆ ನಗರ ನಿವಾಸಿ ಪ್ರಮೀಳಾಬೆಳಿಗ್ಗೆ ಮನೆಗೆ ಬೀಗ ಹಾಕಿಕೊಂಡು ಆಸ್ಪತ್ರೆಗೆ ಹೋಗಿದ್ದಾಗ ಯಾರೋ ಕಳ್ಳರು ನಮ್ಮ ಮನೆಯ ಬೀಗವನ್ನು ಮುರಿದು ಗಾಡ್ರೇಜ್ ಬೀರುವಿನಲ್ಲಿ ಇಟ್ಟಿದ್ದ 19 ಗ್ರಾಂ ತೂಕದ ಬಂಗಾರದ ಆಭರಣಗಳು ಹಾಗು 13 ಸಾವಿರ ರೂ ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿದ್ದಾರೆಂದು ಕೆಟಿಜೆ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಆರೋಪಿತರನ್ನು ಪತ್ತೆ ಮಾಡಲು ಹೆಚ್ಚುವರಿ ಪೊಲೀಸ್ ಅಧೀಕ್ಷಕ ವಿಜಯಕುಮಾರ ಎಮ್ ಸಂತೋಷ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಮಂಜುನಾಥ ಜಿ ಹಾಗೂ ದಾವಣಗೆರೆ ನಗರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಮಲ್ಲೇಶ ದೊಡ್ಡಮನಿ ಮಾರ್ಗದರ್ಶನದಲ್ಲಿ ತಂಡವನ್ನು ರಚನೆ ಮಾಡಲಾಗಿತ್ತು. ಈ ತಂಡ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಆರೋಪಿ ಸೈಯ್ಯದ್ ಫಜಲ್ ( 29 ) ಬಂಧಿಸಲಾಗಿದೆ.
ಆರೋಪಿತನಿಂದ ಒಟ್ಟು 5,51,000/-ರೂ ಬೆಲೆಯ 90.4 ಗ್ರಾಂ ತೂಕದ ಬಂಗಾರದ ಆಭರಣಗಳನ್ನು ಹಾಗು 4 ಸಾವಿರ ರೂ ನಗದು ಹಣವನ್ನು ವಶ ಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಸದರಿ ಆರೋಪಿತನ ಪತ್ತೆಯಿಂದ ಕೆಟಿಜೆ ನಗರ ಪೊಲೀಸ್ ಠಾಣೆಯ 02 ಪ್ರಕರಣಗಳು ಪತ್ತೆಯಾಗಿರುತ್ತದೆ. ಪತ್ತೆ ಕಾರ್ಯದಲ್ಲಿ ಯಶಸ್ವಿಯಾದ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಪೊಲೀಸ್ ಅಧೀಕ್ಷಕ ಉಮಾ ಪ್ರಶಾಂತ್ ಶ್ಲಾಘಿಸಿದ್ದಾರೆ.