ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರ್ನಾಲ್ಕು ದಿನ ಗುಡುಗು, ಮಿಂಚು, ಬಿರು ಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದ್ದು, ಮೇ 13ರವರೆಗೆ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಇಂದು (ಮೇ 10) ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು ಹಾಗೂ ದಕ್ಷಿಣ ಒಳನಾಡಿನ ಶಿವಮೊಗ್ಗ ದಾವಣಗೆರೆ ಹೊರತುಪಡಿಸಿ ಉಳಿದ ಎಲ್ಲ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ.
ಮೇ 11, 12ರಂದು ದಕ್ಷಿಣ ಹಾಗೂ ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳ ಕೆಲವೆಡೆ ವ್ಯಾಪಕ ಮಳೆಯಾಗಲಿದ್ದು, ಯೆಲ್ಲೋ ನೀಡಲಾಗಿದೆ. ಇದೇ ಅವಧಿಯಲ್ಲಿ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆಯಾಗಲಿದೆ. ಮೇ 13ರಿಂದ 15ರವರಗೆ ರಾಜ್ಯದ ಕೆಲ ಭಾಗಗ ಳಲ್ಲಿ ಕನಿಷ್ಠ 50 ಮಿ.ಮೀ.ನಿಂದ ಗರಿಷ್ಠ 70 ಮಿ.ಮೀ. ಮಳೆಯಾಗುವ ಸಂಭವವಿದೆ ಎಂದು ಮುನ್ಸೂಚನೆ ನೀಡಿದೆ.



