ದಾವಣಗೆರೆ: ಕಳ್ಳತನವಾಗಿದ್ದ 15 ಲಕ್ಷ ಮೌಲ್ಯದ ಕೃಷಿ ಯಂತ್ರೋಪಕರಣ ಮತ್ತು ಕೃತ್ಯ ಎಸೆಗಿದ ಕಾನೂನು ಸಂಘರ್ಷಕ್ಕೊಳಗಾದ ಮೂವರು ಬಾಲಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
15,00,000/- ರೂ ಮೌಲ್ಯದ 03 ಟ್ರಾಲಿ, 03 ರೂಟವೇಟರ್, 02 ಬಾಂಡ್ಲಿ, 03 ಬಲರಾಮ, 01 ಫ್ಲ್ಯಾಶರ್ ಹಾಗೂ ಕೃತ್ಯಕ್ಕೆ ಬಳಸಿದ್ದ ಟ್ರಾಕ್ಟರ್ ಇಂಜಿನ್ ವಶಕ್ಕೆ ಪಡೆಯಲಾಗಿದೆ. ಶಿವಪುರ ಗ್ರಾಮದ ಶೇಖರ ನಾಯ್ಕ ಠಾಣೆಗೆ ಹಾಜರಾಗಿ ಮನೆಯ ಬಳಿ ಖಾಲಿ ಜಾಗದಲ್ಲಿ ನಿಲ್ಲಿಸಿದ್ದ ಒಂದು ಸ್ಲಾಚರ್ ನ್ನು ಯಾರೋ ಕಳ್ಳರು ರಾತ್ರಿ ವೇಳೆಯಲ್ಲಿ ಕಳ್ಳತನ ಮಾಡಿಕೊಂಡು ಹೋಗಿದ್ದಾರೆಂದು ದೂರು ನೀಡಿದ್ದರು.
ಅಪರ ಪೊಲೀಸ್ ಅಧೀಕ್ಷಕ ವಿಜಯ್ ಕುಮಾರ್ ಸಂತೋಷ್ ಹಾಗೂ ಮಂಜುನಾಥ ಮತ್ತು ದಾವಣಗೆರೆ ಗ್ರಾಮಾಂತರ ಉಪ-ವಿಭಾಗದ ಪೊಲೀಸ್ ಉಪಾಧೀಕ್ಷಕ ಪ್ರಶಾಂತ್ ಸಿದ್ದನಗೌಡ ಮಾರ್ಗದರ್ಶನದಲ್ಲಿ ಗ್ರಾಮಾಂತರ ಠಾಣೆಯ ಪೊಲೀಸ್ ನಿರೀಕ್ಷಕ ಕಿರಣ್ ಕುಮಾರ್, ಪಿಎಸ್‌ಐ ಜೋವಿತ್ ರಾಜ್ ಹಾಗೂ ಸಿಬ್ಬಂದಿಗಳಾದ ದೇವೇಂದ್ರನಾಯ್ಕ, ನಾಗಭೂಷಣ್, ಅಣ್ಣಯ್ಯ, ಮಹಮ್ಮದ್ ಯುಸುಫ್ ಅತ್ತಾರ್, ವೀರೇಶ್ ಪಿ.ಎಂ ರವರನ್ನೊಳಗೊಂಡ ತಂಡ ಮೂವರು ಕಾನೂನು ಸಂಘರ್ಷಕ್ಕೊಳಗಾದ ಬಾಲಕರನ್ನು ವಶಕ್ಕೆ ಪಡೆಯಲಾಗಿದೆ.
ಈ ಮೇಲ್ಕಂಡ ಪ್ರಕರಣ ಸೇರಿದಂತೆ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದಿನ 06 ಕಡೆ ಹಾಗೂ ಮಾಯಕೊಂಡ ಪೊಲೀಸ್ ಠಾಣಾ ಸರಹದ್ದಿನ 03 ಕಡೆ ಕೃತ್ಯವೆಸಗಿದ್ದ
15,00,000/- ರೂ ಮೌಲ್ಯದ 03 ಟ್ರಾಲಿ, 03 ರೂಟವೇಟರ್, 02 ಬಾಂಡ್ಲಿ, 03 ಬಲರಾಮ, 01 ಫ್ಲ್ಯಾಶರ್ ಹಾಗೂ ಕೃತ್ಯಕ್ಕೆ ಬಳಸಿದ್ದ ಟ್ರಾಕ್ಟರ್ ಇಂಜಿನ್‌ನನ್ನು ಅಮಾನತು ಮಾಡಲಾಗಿದೆ.
ಬಾಲಕರನ್ನು ಸರ್ಕಾರಿ ಪರಿವೀಕ್ಷಣಾಲಯಕ್ಕೆ ಒಪ್ಪಿಸಲಾಗಿದೆ. ಈ ಪ್ರಕರಣದ ಮಾಲು ಮತ್ತು ಕೃತ್ಯವೆಸಗಿದವರನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾದ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು
ಮಾನ್ಯ ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ ಶ್ಲಾಘಿಸಿದ್ದಾರೆ.



