ಡಿವಿಜಿ ಸುದ್ದಿ,ಬೆಂಗಳೂರು: ಕೆಲವರದ್ದು ಬ್ರಿಟಿಷರ ಜೊತೆಗೆ ಹೊಂದಾಣಿಕೆಯ ಹೋರಾಟ, ಇಂತಹ ಉಪವಾಸಕ್ಕೆ ಹೆದರಿ ಬ್ರಿಟಿಷರು ಸ್ವಾತಂತ್ರ ಕೊಟ್ಟದ್ದಲ್ಲ ಎಂಬ ನನ್ನ ಹೇಳಿ ಕೆ ಮಹಾತ್ಮ ಗಾಂಧೀಜಿ ಕುರಿತಾಗಿದ್ದಲ್ಲ ಎಂದು ಸಂಸದ ಅನಂತಕುಮಾರ ಹೆಗಡೆ ಹೇಳಿದ್ದಾರೆ.
BJP MP Anant Kumar Hegde on his statement against Mahatma Gandhi: I own my statement made on 1 Feb, 2020. I never made any reference to any political party or Mahatma Gandhi or anybody else, I was just trying to categorize freedom struggle. pic.twitter.com/MKxES1s3Hr
— ANI (@ANI) February 4, 2020
ಈ ಬಗ್ಗೆ ಸ್ಪಷ್ಟನೆ ನೀಡಿರುವ ಅವರು, ನನ್ನ ಭಾಷಣದಲ್ಲಿ ನಾನು ಯಾವುದೇ ವ್ಯಕ್ತಿ, ಪಕ್ಷವನ್ನು ಉಲ್ಲೇಖಿಸಿಲ್ಲ ಹೇಳಿಕೆ ನೀಡಿಲ್ಲ. ನನ್ನ ಹೇಳಿಕೆಯಲ್ಲಿ ಯಾವುದೇ ರಾಜಕೀಯ ಪಕ್ಷವನ್ನಾಗಲಿ, ಮಹಾತ್ಮಾ ಗಾಂಧೀಜಿ ಅವರನ್ನಾಗಲಿ ಅಥವಾ ಯಾವುದೇ ವ್ಯಕ್ತಿಯನ್ನಾಗಲಿ ಉಲ್ಲೇಖಿಸಿಲ್ಲ. ಸ್ವಾತಂತ್ರ್ಯ ಹೋರಾಟದ ಬಗೆಯನ್ನು ಕುರುತು ಅಂದು ಏನು ಮಾತನಾಡಿದ್ದೆ ಎಂಬುದು ಎಲ್ಲೆಡೆ ಲಭ್ಯವಿವಿದ್ದು, ನನ್ನ ವೆಬ್ಸೈಟ್ನಲ್ಲಿಯೂ ಇದೆ. ಅಂದಿನ ಭಾಷಣದಲ್ಲಿ ನಾನು ಗಾಂಧೀಜಿ ಅವರನ್ನಾಗಲಿ, ನೆಹರೂ ಅವರನ್ನಾಗಲಿ ಟೀಕಿಸಿಲ್ಲ ಎಂದರು.
ಸಮೃದ್ಧ ಸಾಹಿತ್ಯ ಹಾಗೂ ಸಾವರ್ಕರ್ ಸಾಹಿತ್ಯ ಸಂಘ ಇತ್ತೀಚೆಗೆ ಬೆಂಗಳೂರಿನಲ್ಲಿ ಆಯೋಜಿಸಿದ್ದ ಮತ್ತೆ ಮತ್ತೆ ಸಾವರ್ಕರ್ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಅನಂತ ಕುಮಾರ ಹೆಗಡೆ. ಚಂದ್ರಶೇಖರ ಆಜಾದ್, ಭಗತ್ ಸಿಂಗ್ ಅಂತಹ ಕ್ರಾಂತಿಕಾರಿಗಳು ಶಸ್ತ್ರಸಜ್ಜಿತರಾಗಿ ಹೋರಾಟ ಮಾಡಿದರು. ಇನ್ನೊಂದು ವರ್ಗ ಅತ್ಯಂತ ಪ್ರಖರ ರಾಷ್ಟ್ರೀಯ ವಿಚಾರಗಳೊಂದಿಗೆ ಶಿವಾಜಿ, ಹುಕ್ಕ–ಬುಕ್ಕರಂತಹ ನೂರಾರು ಮಂದಿಯನ್ನು ಮುಂದೆ ತಂದರು. ಇನ್ನೊಂದು ರೀತಿಯ ಸ್ವಾತಂತ್ರ್ಯ ಹೋರಾಟಗಾರರು ಹೇಗೆ ಹೋರಾಟ ಮಾಡಬೇಕು ಎಂದು ಬ್ರಿಟಿಷರ ಬಳಿಯೇ ಕೇಳಿ, ಅವರೊಂದಿಗೆ ಹೊಂದಾಣಿಕೆ ಮಾಡಿಕೊಂಡರು. ಒಳಗಡೆ (ಜೈಲಿನಲ್ಲಿ) ನಮ್ಮನ್ನು ಚೆನ್ನಾಗಿ ನೋಡಿಕೊಳ್ಳಿ ಎಂದು ಮನವಿ ಮಾಡಿಕೊಂಡರು. ಪರಿಣಾಮ ಲಾಠಿ ನೋಡದ, ಏಟು ತಿನ್ನದವರನ್ನು ಇತಿಹಾಸದ ಪುಟಗಳಲ್ಲಿ ಸ್ವಾತಂತ್ರ್ಯ ಹೋರಾಟಗಾರರು ಎಂದು ಬಿಂಬಿಸಲಾಯಿತು. ಇತಿಹಾಸದ ಪ್ರಕಾರ ಬ್ರಿಟಿಷರು ಉಪವಾಸಕ್ಕೆ ಹೆದರಿ, ಸ್ವಾತಂತ್ರ್ಯ ಕೊಟ್ಟು ಓಡಿ ಹೋದರು ಎಂಬುದನ್ನು ಕೇಳಿದರೆ ತಣ್ಣಗಿರುವ ರಕ್ತ ಹೆಪ್ಪುಗಟ್ಟಿ ಹೋಗುತ್ತದೆ ಎಂದು ಹೇಳಿದ್ದರು. ಇದು ವಿವಾದಕ್ಕೆ ಕಾರಣವಾಗಿತ್ತು.