ದಾವಣಗೆರೆ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಾನಪದ ವಿದ್ವಾಂಸ, ಬಾಪೂಜಿ ವಿದ್ಯಾಸಂಸ್ಥೆಯ ಶೈಕ್ಷಣಿಕ ನಿರ್ದೇಶಕ ಎಂ.ಜಿ. ಈಶ್ವರಪ್ಪ (74) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು (ಜೂ.1) ಮಧ್ಯಾಹ್ನ ನಿಧನ ಹೊಂದಿದ್ದಾರೆ.
ಶ್ವಾಸಕೋಶದ ಸಮಸ್ಯೆಯಿಂದ ನಿಧನ ಹೊಂದಿದ್ದಾರೆ. ಅವರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ. ಅಂತ್ಯಕ್ರಿಯೆ ಬಾಳೆ (ಜೂನ್ 2) ದಾವಣಗೆರೆಯಲ್ಲಿ ನಡೆಯಲಿದೆ.15 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ರಂಗಭೂಮಿ, ಜಾನಪದ, ಸಂಶೋಧನೆ ತೊಡಗಿಸಿಕೊಂಡಿದ್ದ ಅವರು, 38 ವರ್ಷ ಅಧ್ಯಾಪಕರಾಗಿ ಸಹ ಸೇವೆ ಸಲ್ಲಿಸಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿನ ಸಾಧನೆಗಾಗಿ 2020ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಬಂದಿದೆ.1950ರಂದು ಶಿವಮೊಗ್ಗ ತಾಲ್ಲೂಕಿನ ಹಾಡೋನಹಳ್ಳಿಯಲ್ಲಿ ಜನಿಸಿದ ಈಶ್ವರಪ್ಪ ಅವರು, ದಾವಣಗೆರೆ ಕಾರ್ಯಕ್ಷೇತ್ರವನ್ನಾಗಿಸಿಕೊಂಡಿದ್ದರು.



