ನವದೆಹಲಿ : ಸಂಸದ ಅನಂತಕುಮಾರ್ ಹೆಗಡೆ ಅವರು ಮಹಾತ್ಮ ಗಾಂಧಿಜೀ ಅವರ ಬಗ್ಗೆ ವಿವಾದಾತ್ಮಕ ಹೇಳಿಕೆ ಹಿನ್ನೆಲೆ ವಿಪಕ್ಷಗಳ ಭಾರೀ ಕೋಲಾಹಲದ ನಂತರ ಮಾತನಾಡಿದ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ , ಬಿಜೆಪಿಗರೇ ಮಹಾತ್ಮ ಗಾಂಧಿಜೀ ನಿಜವಾದ ಭಕ್ತರು ಎಂದು ಹೇಳಿದರು.
ಬಿಜೆಪಿಗರೇ ಗಾಂಧೀಜಿಯ ನಿಜವಾದ ಭಕ್ತರು ಮತ್ತು ಅನುಯಾಯಿಗಳು. ಕಾಂಗ್ರೆಸ್ , ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿಯವರು ನಕಲಿ ಭಕ್ತರು ಎಂದು ತಿರುಗೇಟು ನೀಡಿದ್ದಾರೆ. ಇದಕ್ಕೂ ಮುನ್ನ ಸಂಸದ ಅನಂತಕುಮಾರ ಹೆಗಡೆ ಬೇಷರತ್ತು ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿ ವಿರೋಧ ಪಕ್ಷ ನಾಯಕರು ಲೋಕಸಭೆ ಕಲಾಪ ಕಲಾಪದಲ್ಲಿ ಭಾರೀ ಗದ್ದಲ, ಧರಣಿ, ಕೋಲಾಹಲ ಉಂಟು ಮಾಡಿದ್ದರು.
ಸಮೃದ್ಧ ಸಾಹಿತ್ಯ ಹಾಗೂ ಸಾವರ್ಕರ್ ಸಾಹಿತ್ಯ ಸಂಘ ಇತ್ತೀಚೆಗೆ ಬೆಂಗಳೂರಿನಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರರು ಹೇಗೆ ಹೋರಾಟ ಮಾಡಬೇಕು ಎಂದು ಬ್ರಿಟಿಷರ ಬಳಿಯೇ ಕೇಳಿ, ಅವರೊಂದಿಗೆ ಹೊಂದಾಣಿಕೆ ಮಾಡಿಕೊಂಡರು. ಒಳಗಡೆ ನಮ್ಮನ್ನು ಚೆನ್ನಾಗಿ ನೋಡಿಕೊಳ್ಳಿ ಎಂದು ಮನವಿ ಮಾಡಿಕೊಂಡರು. ಪರಿಣಾಮ ಲಾಠಿ ನೋಡದ, ಏಟು ತಿನ್ನದವರನ್ನು ಇತಿಹಾಸದ ಪುಟಗಳಲ್ಲಿ ಸ್ವಾತಂತ್ರ್ಯ ಹೋರಾಟಗಾರಾಗಿದ್ದಾರೆ. ಇತಿಹಾಸದ ಪ್ರಕಾರ ಬ್ರಿಟಿಷರು ಉಪವಾಸಕ್ಕೆ ಹೆದರಿ, ಸ್ವಾತಂತ್ರ್ಯ ಕೊಟ್ಟು ಓಡಿ ಹೋದರು ಎಂಬುದನ್ನು ಕೇಳಿದರೆ ತಣ್ಣಗಿರುವ ರಕ್ತ ಹೆಪ್ಪುಗಟ್ಟಿ ಹೋಗುತ್ತದೆ ಎನ್ನುವ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗಿತ್ತು.