ದಾವಣಗೆರೆ: ಜಿಲ್ಲೆಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ ಖಾಲಿ ಇರುವ ಜಿಲ್ಲಾ ಎಂಐಎಸ್, ಎಂಐಎಸ್ ಸಮಾಲೋಚಕರ ಹುದ್ದೆಗೆ ತಾತ್ಕಾಲಿಕವಾಗಿ ಗುತ್ತಿಗೆ, ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಆರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಎಂ.ಸಿ.ಎ, ಎಂ.ಎಸ್ಸಿ ಕಂಪ್ಯೂಟರ್ ಸೈನ್ಸ್, ಬಿ.ಇ ಕಂಪ್ಯೂಟರ್ ಸೈನ್ಸ್ನಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು ಹಾಗೂ ಡೇಟಾ ನಿರ್ವಹಣೆಯಲ್ಲಿ 3-5 ವರ್ಷಗಳ ಅನುಭವ ಹೊಂದಿರಬೇಕು. ಅರ್ಜಿ ಸಲ್ಲಿಸಲು ಜು.5 ರಂದು ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಕಾರ್ಯನಿರ್ವಹಕ ಇಂಜಿನಿಯರ್ ದಾವಣಗೆರೆ ಇವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು.