ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲೂಕಿನ ಹೆಬ್ಬಳಗೆರೆ ಗ್ರಾಮದ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, 5.54 ಲಕ್ಷ ಮತ್ತು 15 ಆರೋಪಿಗಳನ್ನು ವಶಕ್ಕೆ ಪಡಿಸಿಕೊಳ್ಳಲಾಗಿದೆ.
ಜೂಜಾಟ ಬಗ್ಗೆ ಜಿಲ್ಲಾ ಪೊಲೀಸ್ ಅಧೀಕ್ಷಕ ಉಮಾ ಪ್ರಶಾಂತ್ ಅವರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಜಿಲ್ಲಾ ಪೊಲೀಸ್ ಕಚೇರಿಯ ಪೊಲೀಸ್ ನಿರೀಕ್ಷಕ ಇಮ್ರಾನ್ ಬೇಗ್ ಮತ್ತು ಸಿಬ್ಬಂದಿ ಒಳಗೊಂಡ ತಂಡ ರಚಿಸಲಾಯಿತು. ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ವಿಜಯ ಕುಮಾರ್ ಎಂ.ಸಂತೋಷ್, ಮಂಜುನಾಥ್ ಮಾರ್ಗದರ್ಶದಲ್ಲಿ ದಾಳಿ ನಡೆಸಿ, 15 ಜನ ಮತ್ತು 5.54 ಲಕ್ಷ ಹಾಗೂ ಇಸ್ಪೀಟ್ ಕಾರ್ಡ್ ಗಳನ್ನು ವಶಕ್ಕೆ ಪಡೆಯಲಾಗಿರುತ್ತದೆ, ಈ ಸಂಬಂಧ ಆರೋಪಿತರ ವಿರುದ್ಧ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿರುತ್ತದೆ.
ದಾಳಿಯನ್ನು ನಡೆಸುವಲ್ಲಿ ಸಿಪಿಐ ಇಮ್ರಾನ್ ಬೇಗ್ ಜಿಲ್ಲಾ ಪೊಲೀಸ್ ಕಚೇರಿ ಸಿಬ್ಬಂದಿ ಮಜೀದ್, ರಮೇಶ್ ನಾಯ್ಕ್, ಆಂಜನೇಯ, ಪ್ರಭಾಕರ್, ಮುಸ್ತಾಕ್ ಆಹ್ಮದ್, ಸೈಪುಲ್ಲಾ, ಶಶಿಕುಮಾರ್, ನರೇಂದ್ರ ಭಾಗವಹಿಸಿದ್ದರು.



