ಡಿವಿಜಿ ಸುದ್ದಿ, ಕೋಲಾರ: ಮುಂದಿನ ವರ್ಷ 3 ವರ್ಷದಲ್ಲಿ 24 ಸಾವಿರ ಶಿಕ್ಷಕರು ನಿವೃತ್ತರಾಗಲಿದ್ದು, 30 ಸಾವಿರ ಶಿಕ್ಷಕರ ನೇಮಕಾತಿಗೆ ಹಣಕಾಸು ಇಲಾಖೆ ಒಪ್ಪಿಗೆ ಕೊಟ್ಟಿದೆ. ಪ್ರತಿ ವರ್ಷ 10 ಸಾವಿರ ಶಿಕ್ಷಕರನ್ನು ನೇಮಿಸಿಕೊಳ್ಳಲಾಗುವುದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ತಾಲ್ಲೂಕಿನ ಕೆಂಬೋಡಿ ಮತ್ತು ವಡಗೂರು ಸರ್ಕಾರಿ ಶಾಲೆಗಳಿಗೆ ನೀಡಿ ಮಾತನಾಡಿದ ಅವರು, ರಾಜ್ಯದಲ್ಲಿ 30 ಸಾವಿರ ಶಿಕ್ಷಕರ ಕೊರತೆಯಿದ್ದು, ಪ್ರಸ್ತುತ 10,650 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಅತಿ ಶೀಘ್ರವೇ 2 ಸಾವಿರ ಶಿಕ್ಷಕರ ನೇಮಕಾತಿ ಆಗಲಿದೆ. ಇದಲ್ಲದೆ ಶಿಕ್ಷಕರ ಸ್ನೇಹಿ ವರ್ಗಾವಣೆ ಕಾಯ್ದೆ ಜಾರಿಗೆ ಚಿಂತಿಸಿದ್ದು, ವಿಧಾನಮಂಡಲ ಅಧಿವೇಶನದಲ್ಲಿ ಕಾಯ್ದೆಗೆ ಅನುಮೋದನೆ ಸಿಗಲಿದೆ ಎಂದರು.
ಶಿಕ್ಷಣ ಇಲಾಖೆಯಲ್ಲಿ ಶಿಕ್ಷಕರ ವರ್ಗಾವಣೆಯು ದಂಧೆಯಾಗಿದ್ದು, ಇದರಲ್ಲಿ ಪ್ರಭಾವಿಗಳ ಕೈವಾಡವಿದೆ. ಇದರಿಂದ ಶಿಕ್ಷಕರಿಗೆ ತೊಂದರೆಯಾಗುತ್ತಿದೆ. ಇಲಾಖೆಯಲ್ಲಿ ಶೇ. 60ರಷ್ಟು ಮಹಿಳಾ ಶಿಕ್ಷಕರಿದ್ದಾರೆ. ನಿವೃತ್ತಿಯ 2 ವರ್ಷ ಮುಂಚೆ ವರ್ಗಾವಣೆ ಮಾಡುವುದಿಲ್ಲ. ವಲಯ ಹಂತದ ವರ್ಗಾವಣೆ ಕೈಬಿಟ್ಟು, ಜಿಲ್ಲೆ ಹಾಗೂ ತಾಲ್ಲೂಕು ವ್ಯಾಪ್ತಿಯಲ್ಲಿ ವರ್ಗಾವಣೆ ಮಾಡಲಾಗುವುದು ಎಂದರು. ಇಡೀ ವರ್ಷ ವರ್ಗಾವಣೆ ಮಾಡುವುದಿಲ್ಲ. ಮೇ ಅಂತ್ಯದೊಳಗೆ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಳಿಸುತ್ತೇವೆ ಎಂದರು.
.



