ಬೆಂಗಳೂರು: ರಾಜ್ಯದ ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಟಗುವ ಸಾಧ್ಯತೆ ಇದ್ದು, ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಜೋರು ಮಳೆ ಸುರಿಯಲಿದೆ. ಜುಲೈ 1, 2 ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ. ರಾಜ್ಯದಲ್ಲಿ ಮುಂದಿನ ಒಂದು ವಾರ ಸಾಮಾನ್ಯ ಮಳೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಯಚೂರು, ಯಾದಗಿರಿ, ಬೀದರ್, ಕಲಬುರ್ಗಿ, ಗದಗ, ಚಿಕ್ಕಬಳ್ಳಾಪುರ, ಬೆಂಗಳೂರು, ದಾವಣೆಗೆರೆ, ಕೋಲಾರ, ಮಂಡ್ಯ, ತುಮಕೂರು ಜಿಲ್ಲೆಯಲ್ಲೂ ಮಳೆಯಾಗಲಿದೆ.ಮಲೆನಾಡು ಭಾಗದಲ್ಲಿ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ಗಾಳಿ ಬೀಸಲಿದ್ದು, ಕರಾವಳಿಯಲ್ಲಿ 35 ರಿಂದ 50 ಕಿ.ಮೀ. ವೇಗದ ಗಾಳಿ ಇರಲಿದೆ. ಈ ವೇಳೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.



