ದಾವಣಗೆರೆ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಪ್ರಾಯೋಜಕತ್ವದಲ್ಲಿ ಸಿಡಾಕ್(ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ, ಧಾರವಾಡ) ಸಂಸ್ಥೆಯಿಂದ ಸ್ವಯಂ ಉದ್ಯೋಗ ಕೈಗೊಳ್ಳಲು ಇಚ್ಛಿಸುವ ದಾವಣಗೆರೆ ಜಿಲ್ಲೆಯ ಆಸಕ್ತ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಒಂದು ದಿನದ ಉದ್ಯಮಶೀಲತಾ ತಿಳುವಳಿಕೆ ತರಬೇತಿ ಶಿಬಿರವನ್ನು ಜುಲೈ ಕೊನೆಯ ವಾರದಲ್ಲಿ ನಗರದ ಸಿಡಾಕ್ ದಾವಣಗೆರೆ ವಿಭಾಗದಲ್ಲಿ ಆಯೋಜಿಸಲಾಗಿದೆ.
ಕನಿಷ್ಠ 18 ವರ್ಷ ಮೇಲ್ಟಟ್ಟಿದ್ದು ಓದಲು, ಬರೆಯಲು ಬರುತ್ತಿರಬೇಕು. ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು 2 ಪಾಸ್‍ಪೆÇೀರ್ಟ್ ಅಳತೆಯ ಫೋಟೋ ಹಾಗೂ ಆಧಾರ್ ಕಾರ್ಡ್‍ನ ಪ್ರತಿಯೊಂದಿಗೆ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಚೇರಿ. ಸಿಡಾಕ್, ಪ್ಲಾಟ್ ನಂ: 76ಎ-(ಪಿ1), ಕರೂರು ಕೈಗಾರಿಕಾ ಪ್ರದೇಶ, ಪಿ.ಬಿ. ರಸ್ತೆ, ದಾವಣಗೆರೆ-577006 ಬಸವರಾಜ ಜಿ. ಬಿ. ತರಬೇತಿದಾರರು ಮೊ.ಸಂ 9164742033, ಹಾಗೂ ವಿನಯ ಜಿ. ಕೆ. ತರಬೇತಿದಾರರು ಮೊ.ಸಂ: 9886115200 ಸಂಪರ್ಕಿಸಬೇಕೆಂದು ಸಿಡಾಕ್ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.