ದಾವಣಗೆರೆ: ಐಎಎಸ್ ಅಧಿಕಾರಿ ಡಾ.ಜಿ.ಎಂ.ಗಂಗಾಧರಸ್ವಾಮಿ ಅವರನ್ನು ದಾವಣಗೆರೆ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ನೂತನ ಜಿಲ್ಲಾಧಿಕಾರಿಗಳಾಗಿ ನೇಮಕಗೊಂಡಿರುವ ಗಂಗಾಧರಸ್ವಾಮಿ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಇಂದು (ಜು.5) ಬೆಂಗಳೂರಿನ ನಿವಾಸದಲ್ಲಿ ಶುಭಕೋರಿದರು. ಸಂದರ್ಭದಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಉತ್ತಮವಾಗಿ ಕೆಲಸ ಮಾಡುವಂತೆ ಸೂಚಿಸಿ ಶುಭ ಕೋರಿದೆ.
ಗಂಗಾಧರಸ್ವಾಮಿ ಅವರು ಕೃಷಿ ಇಲಾಖೆಯ ಮಾರುಕಟ್ಟೆ ವಿಭಾಗದ ನಿರ್ದೇಶಕರಾಗಿದ್ದರು. ಹಾಲಿ ಜಿಲ್ಲಾಧಿಕಾರಿ ಎಂ.ವಿ.ವೆಂಕಟೇಶ್ ಅವರನ್ನು ವರ್ಗಾವಣೆಯಾಗಿದ್ದು, ಇನ್ನೂ ಸ್ಥಳ ನಿಯೋಜನೆ ಮಾಡಿಲ್ಲ.