ದಾವಣಗೆರೆ: ಹರಿಹರ, ಹೊನ್ನಾಳಿ ಹಾಗೂ ಹರಪನಹಳ್ಳಿ ತಾಲ್ಲೂಕಿನ ಮೂಲಕ ಹಾದುಹೋಗುವ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಪರಿವರ್ತಿಸುವಂತೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದರು.
ಲೋಕೋಪ ಯೋಗಿ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆಯಲ್ಲಿ ನಡೆಸಿ ಮಾತನಾಡಿದರು. ಈಗಾಗಲೇ ಈ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಪರಿವರ್ತಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಅಧಿಕಾರಿಗಳಿಗೆ ಸೂಚಿಸಿದರು.
2016ರಲ್ಲಿ 800 ಕೋಟಿ ವೆಚ್ಚದಲ್ಲಿ ಪ್ರಸ್ತಾವನೆ ಸಲ್ಲಿಸಲಾಗಿದ್ದು, 2023ಕ್ಕೆ ಇದರ ವೆಚ್ಚ 2017 ಕೋಟಿಗೆ ಏರಿದೆ. ಇದನ್ನು ಶೀಘ್ರವೇ
ಅನುಮೋದನೆಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಗಮನಕ್ಕೆ ತರಲಾಗಿದ್ದು, ಈ ಯೋಜನೆಯಿಂದ ಸಾಮಾಜಿಕ ಹಾಗೂ ಆರ್ಥಿಕ
ಬಲವರ್ಧನೆ ಆಗಲಿದೆ ಎಂದರು.



