ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಚುರುಕು ಪಡೆದಿದ್ದು, ಎಲ್ಲಡೆ ಮಳೆ ಅಬ್ಬರ ಜೋರಾಗಿದೆ. ಕೆಲವಡೆ ಭಾರಿ ಮಳೆಯಾಗುತ್ತಿದ್ದು, ಅದರಲ್ಲೂ ಕರಾವಳಿ, ಮಲೆನಾಡು ಅಕ್ಷರಶಃ ತತ್ತರಿಸಿ ಹೋಗಿದೆ. ಈ ಮಳೆ ಮುಂದಿನ 48 ಗಂಟೆ ವರೆಗೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ, ಮಲೆನಾಡು ಭಾಗ ನಿರಂತರವಾಗಿ ಮಳೆಗೆಜನ ಜೀವನ ಅಸ್ತವ್ಯಸ್ತವಾಗಿದೆ. ದಕ್ಷಿಣ ಕನ್ನಡ & ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಲಿದೆ. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಕೂಡ ಮುಂಗಾರು ಮಳೆ ಅಬ್ಬರಿಸಲಿದೆ. ಇನ್ನು ಬೆಳಗಾವಿ ಜಿಲ್ಲೆಯಲ್ಲಿ ಮಳೆರಾಯನ ಆರ್ಭಟ ಮತ್ತಷ್ಟು ಬಿರುಸು ಪಡೆದಿದ್ದು, ಬಯಲು ಸೀಮೆ ಜಿಲ್ಲೆಗಳಲ್ಲಿಯೂ ಭರ್ಜರಿ ಮಳೆಯಾಗಲಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ರಾಮನಗರ, ಚಾಮರಾಜನಗರ, ತುಮಕೂರು, ದಾವಣಗೆರೆ ಜಿಲ್ಲೆ, ಹಾಸನ, ಚಿಕ್ಕಮಗಳೂರಿನಲ್ಲಿ ಭರ್ಜರಿ ಮಳೆ ಬೀಳಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಉತ್ತರ ಕರ್ನಾಟಕದ ಕಲಬುರಗಿ, ಕೊಪ್ಪಳ, ಯಾದಗಿರಿ, ಬೀದರ್ ಸೇರಿ ಬಾಗಲಕೋಟೆ, ರಾಯಚೂರಲ್ಲಿ ಮಳೆಯಾಗಲಿದೆ.



