Connect with us

Dvgsuddi Kannada | online news portal | Kannada news online

ದಾವಣಗೆರೆ: ಮುಂಗಾರು ಹಂಗಾಮಿನ ಬೆಳೆಗಳಿಗೆ ವಿಮಾ ಕಂತು ಪಾವತಿಸಲು ಆಗಸ್ಟ್ 16‌ ಕೊನೆಯ ದಿನ

images 50

ದಾವಣಗೆರೆ

ದಾವಣಗೆರೆ: ಮುಂಗಾರು ಹಂಗಾಮಿನ ಬೆಳೆಗಳಿಗೆ ವಿಮಾ ಕಂತು ಪಾವತಿಸಲು ಆಗಸ್ಟ್ 16‌ ಕೊನೆಯ ದಿನ

ದಾವಣಗೆರೆ: ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ವಿವಿಧ ವಿಮಾ ಘಟಕಗಳಲ್ಲಿ ಅಧಿಸೂಚಿಸಲಾದ ಬೆಳೆಗಳಿಗೆ ಬೆಳೆ ಸಾಲ ಪಡೆದ, ಪಡೆಯದ ರೈತರು ನೋಂದಾಯಿಸಿಕೊಳ್ಳಲು ತಿಳಿಸಲಾಗಿದೆ. ಬೆಳೆಸಾಲ ಪಡೆದ ರೈತರು ಬೆಳೆಸಾಲ ಮಂಜೂರು ಮಾಡುವಾಗ, ಕಡ್ಡಾಯವಾಗಿ ಬೆಳೆ ವಿಮೆಗೆ ಒಳಪಡಿಸಲಾಗುವುದು, ಬೆಳೆ ಸಾಲ ಪಡೆಯದ ರೈತರು ಅರ್ಜಿಯೊಂದಿಗೆ ಭೂಮಿ ಹೊಂದಿರುವುದಕ್ಕೆ ದಾಖಲೆಗಳಾದ ಪಹಣಿ, ಖಾತೆ ಪುಸ್ತಕ, ಪಾಸ್ ಪುಸ್ತಕ, ಕಂದಾಯ ರಶೀದಿ ಹಾಗೂ ಆಧಾರ್ ಸಂಖ್ಯೆಯನ್ನು ನೀಡಿ ಹತ್ತಿರದ ಬ್ಯಾಂಕ್, ಆರ್ಥಿಕ ಸಂಸ್ಥೆಗಳು ಅಥವಾ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ವಿಮಾ ಕಂತು ಪಾವತಿಸಿ ನೋಂದಾಯಿಕೊಳ್ಳಬಹುದಾಗಿದೆ.

ಮುಸುಕಿನ ಜೋಳ (ನೀರಾವರಿ) (ಮಳೆ ಆಶ್ರಿತ), ಭತ್ತ (ನೀರಾವರಿ), ಜೋಳ (ಮಳೆ ಆಶ್ರಿತ), ಜೋಳ (ನೀರಾವರಿ), ರಾಗಿ (ಮಳೆ ಆಶ್ರಿತ), ರಾಗಿ (ನೀರಾವರಿ), (ಮಳೆ ಆಶ್ರಿತ), ನವಣೆ (ಮಳೆ ಆಶ್ರಿತ), ತೊಗರಿ (ಮಳೆ ಆಶ್ರಿತ), ಶೇಂಗಾ (ಮಳೆ ಆಶ್ರಿತ), ಶೇಂಗಾ (ನೀರಾವರಿ), ಸಜ್ಜೆ (ಮಳೆ ಆಶ್ರಿತ), ಹುರುಳಿ (ಮಳೆ ಆಶ್ರಿತ) ರೈತರು ಜುಲೈ 31 ರೊಳಗಾಗಿ ವಿಮಾ ನೊಂದಣಿ ಮಾಡಿಸಲು ಕೊನೆ ದಿನವಾಗಿರುತ್ತದೆ. ಸೂರ್ಯಕಾಂತಿ (ಮಳೆ ಆಶ್ರಿತ), ಸೂರ್ಯಕಾಂತಿ (ನೀರಾವರಿ) ಈ ಬೆಳೆಗಳಿಗೆ ಆಗಸ್ಟ್ 16 ರವರೆಗೆ ಅವಕಾಶವಿರುತ್ತದೆ ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top