ದಾವಣಗೆರೆ: ಡೆಂಗ್ಯು ಜ್ವರದಿಂದ ಬಳಲುತ್ತಿದ್ದ ಯುವತಿ ಸಾವನ್ನಪ್ಪಿದ್ದಾಳೆ. ರೇಖಾ ಎನ್ (19) ಸಾವನ್ನಪ್ಪಿದ ಯುವತಿ. ದಾವಣಗೆರೆ ಜಿಲ್ಲೆಯ ಜಗಳೂರ ಪಟ್ಟಣದ ರಾಮಾಲಯ ರಸ್ತೆ ನಿವಾಸಿಯಾಗಿದ್ದಾರೆ.
ರೇಖಾ ಕಳೆದ ಕೆಲ ದಿನಗಳ ಹಿಂದೆ ನಾಮಕರಣ ಶಾಸ್ತ್ರ ಕಾರ್ಯಕ್ರಮಕ್ಕೆ ಬಳ್ಳಾರಿಗೆ ತೆರಳಿದ್ದರು. ಅಲ್ಲಿ ತೀವ್ರ ಜ್ವರದಿಂದ ಬಳಲಿದ್ದ ರೇಖಾಗೆ ಬಳ್ಳಾರಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ. ಬಳ್ಳಾರಿಯಲ್ಲಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಅಧಿಕೃತ ವರದಿ ನಿರೀಕ್ಷಿಸಲಾಗಿದೆ ಎಂದು ಜಗಳೂರು ತಾಲೂಕು ವೈದ್ಯಾಧಿಕಾರಿ ಡಾ. ವಿಶ್ವನಾಥ ಮಾಹಿತಿ ನೀಡಿದ್ದಾರೆ.