ದಾವಣಗೆರೆ: ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ನಿರಂತರ ಮಳೆಯಾಗುತ್ತಿದೆ. ಸತತ ಮಳೆಗೆ ಹಳ್ಳ- ಕೊಳ್ಳಗಳು ಉಕ್ಕಿ ಹರಿಯುತ್ತಿವೆ. ಜುಲೈ 19 ರಂದು ಜಿಲ್ಲೆಯಲ್ಲಿ 17.2 ಮಿ.ಮೀ. ಸರಾಸರಿ ಮಳೆಯಾಗಿದ್ದು, ಅಧಿಕ ಮಳೆಯಿಂದಾಗಿ ಒಟ್ಟಾರೆ ರೂ.12.30 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ.
ತಾಲ್ಲೂಕುವಾರು ಮಳೆ ವಿವರ; ಚನ್ನಗಿರಿ 18.9 ಮಿ.ಮೀ, ದಾವಣಗೆರೆ 18.6 ಮೀ.ಮಿ , ಹರಿಹರ 20.6 ಮೀ.ಮಿ, ವಾಸ್ತವ, ಹೊನ್ನಾಳಿ 23.3 ವಾಸ್ತವ, ಜಗಳೂರು 5.6 ಮೀ.ಮಿ ನ್ಯಾಮತಿ 26.2 ಮೀ.ಮಿ ಸರಾಸರಿ ಮಳೆಯಾಗಿದೆ.
ದಾವಣಗೆರೆ ತಾಲ್ಲೂಕು ವ್ಯಾಪ್ತಿಯಲ್ಲಿ 3 ಕಚ್ಚಾ ಮನೆಗಳು ಭಾಗಶ: ಹಾನಿಯಾಗಿದ್ದು ರೂ. 90 ಸಾವಿರ ಅಂದಾಜು ನಷ್ಟ ಸಂಭವಿಸಿರುತ್ತದೆ. ಹರಿಹರ ತಾಲ್ಲೂಕು ವ್ಯಾಪ್ತಿಯಲ್ಲಿ 2 ಪಕ್ಕಾ ಮನೆ ಪೂರ್ಣ ಹಾನಿಯಾಗಿದ್ದು ರೂ.4. ಲಕ್ಷ, 2 ಕಚ್ಚಾ ಮನೆ ಭಾಗಶಃ ಹಾನಿಯಾಗಿದ್ದು, ರೂ.60 ಸಾವಿರ, 1 ದನದ ಕೊಟ್ಟಿಗೆ ಹಾನಿಯಾಗಿದ್ದು, ರೂ.5 ಸಾವಿರ ಒಟ್ಟು ರೂ. 5.25 ಲಕ್ಷಅಂದಾಜು ನಷ್ಟ ಸಂಭವಿಸಿರುತ್ತದೆ. ನ್ಯಾಮತಿ ತಾಲ್ಲೂಕು ವ್ಯಾಪ್ತಿಯಲ್ಲಿ 3 ಪಕ್ಕಾ ಮನೆ ಭಾಗಶಃ ಹಾನಿಯಾಗಿದ್ದು, ರೂ. 75 ಸಾವಿರ ಅಂದಾಜು ನಷ್ಟ ಸಂಭವಿಸಿರುತ್ತದೆ. ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿ 2 ಪಕ್ಕಾ ಮನೆ ಪೂರ್ಣ ಹಾನಿಯಾಗಿದ್ದು, ರೂ. 1.60 ಲಕ್ಷ, 9 ಪಕ್ಕಾ ಮನೆ ಭಾಗಶಃ ಹಾನಿಯಾಗಿದ್ದು, ರೂ.3.80 ಲಕ್ಷ, ಅಂದಾಜು ನಷ್ಟ ಸಂಭವಿಸಿರುತ್ತದೆ.
ಸರ್ಕಾರದ ಮಾರ್ಗಸೂಚಿಯನ್ವಯ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದ್ದಾರೆ.