Connect with us

Dvgsuddi Kannada | online news portal | Kannada news online

ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಫೆ. 13ಕ್ಕೆ ಕರ್ನಾಟಕ ಬಂದ್  

ಪ್ರಮುಖ ಸುದ್ದಿ

ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಫೆ. 13ಕ್ಕೆ ಕರ್ನಾಟಕ ಬಂದ್  

ಡಿವಿಜಿ ಸುದ್ದಿ, ಬೆಂಗಳೂರು: ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ  ಕರ್ನಾಟಕ ಸಂಘಟನೆಗಳ ಒಕ್ಕೂಟ ಸೇರಿದಂತೆ ವಿವಿಧ ಸಂಘಟನೆಗಳು  ಫೆ. 13ಕ್ಕೆ ಕರ್ನಾಟಕ ಬಂದ್ ಗೆ ಕರೆ ನೀಡಿವೆ.

ಕರ್ನಾಟಕ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಾಗೇಶ್ ನೇತೃತ್ವದಲ್ಲಿ ಕರ್ನಾಟಕ ಬಂದ್‍ಗೆ ಕರೆ ನೀಡಿದ್ದು, 400ಕ್ಕೂ ಹೆಚ್ಚು ಸಂಘಟನೆಗಳು ಬಂದ್‍ಗೆ ಬೆಂಬಲ ಸೂಚಿಸಿವೆ. ಓಲಾ, ಊಬರ್,  ಟ್ಯಾಕ್ಸಿ, ಲಾರಿ ಮಾಲೀಕರ ಸಂಘ, ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದ ರೈತ ಸಂಘಟನೆ, ದಲಿತ ಸಂಘಟನೆ, ವಿವಿಧ ಕಾರ್ಮಿಕ ಹಾಗೂ ಕನ್ನಡಪರ ಸಂಘಟನೆಗಳಿಂದ ಬಂದ್‍ಗೆ ಬೆಂಬಲ ಸಿಕ್ಕಿದೆ.

ಅಂದು ಬೆಳಗ್ಗೆ 11 ಘಂಟೆಗೆ ಬೆಂಗಳೂರಿನ ಟೌನ್ ಹಾಲ್‍ನಿಂದ ಫ್ರೀಡಂಪಾರ್ಕ್ ವರಗೆ ಬೃಹತ್ ಪ್ರತಿಭಟನಾ ಜಾಥಾ ನಡೆಯಲಿದೆ. ಕಳೆದ 96 ದಿನಗಳಿಂದ ಮೌರ್ಯ ಸರ್ಕಲ್ ಬಳಿ  ಧರಣಿ ನಡೆಸಲಾಗುತ್ತಿದ್ದು, ಇದುವರೆಗೂ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿಲ್ಲ. ಹೀಗಾಗಿ ಇದೇ 13ಕ್ಕೆ ಕರ್ನಾಟಕ ಬಂದ್‍ಗೆ ಕರೆ ನೀಡಲಾಗಿದೆ.

1983ರಲ್ಲಿ ರಾಮಕೃಷ್ಣ ಹೆಗಡೆ ಮುಖ್ಯಮಂತ್ರಿಯಾಗಿದ್ದ ವೇಳೆ ಕನ್ನಡಿಗರಿಗೆ ಕರ್ನಾಟಕದಲ್ಲಿ ಪರಭಾಷಿಕರಿಂದ ಅನ್ಯಾಯವಾಗುತ್ತಿದೆ ಎಂಬ ಕೂಗು ಎದ್ದಿತ್ತು. ಆಗ ಕರ್ನಾಟಕದಲ್ಲಿ ಕನ್ನಡಿಗರಿಗೆ ದೊರೆಯುತ್ತಿದ್ದ ಉದ್ಯೋಗಾವಕಾಶಗಳನ್ನು ಪರಿಶೀಲಿಸಿ ವಿಮರ್ಶಿಸಲು  ಸರೋಜಿನಿ ಮಹಿಷಿಯವರಿಗೆ ಕೇಳಿಕೊಂಡಿತ್ತು. ಮಹಿಷಿಯವರು ನೀಡಿದ ವರದಿಯು ಸರೋಜಿನಿ ಮಹಿಷಿ ವರದಿ ಎಂದೇ ಖ್ಯಾತವಾಗಿದ್ದು, ಕರ್ನಾಟಕದಲ್ಲಿ ನ್ಯಾಯವಾಗಿ ಕನ್ನಡಿಗರಿಗೆ ಉದ್ಯೋಗಾವಕಾಶಗಳು ದೊರೆಯಬೇಕೆಂಬುದನ್ನು ಈ ವರದಿ ಪ್ರತಿಪಾದಿಸುತ್ತಿದೆ.

1986ರಲ್ಲೇ ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿತ್ತು.  ಉದ್ಯೋಗದಲ್ಲಿ ಕನ್ನಡಿಗರಿಗೆ ಅವಕಾಶ ಕಲ್ಪಿಸಿಕೊಡಬೇಕು ಎಂದು ವರದಿಯಲ್ಲಿದ್ದು,  ಐಟಿ, ಬಿಟಿ ಸೇರಿದಂತೆ ರಾಜ್ಯದ ಎಲ್ಲಾ ಖಾಸಗಿ ಉದ್ಯಮಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಜಾರಿ ಸೇರಿ 14 ಪ್ರಮುಖ ಶಿಫಾರಸುಗಳನ್ನು ಒಳಗೊಂಡಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top