ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲದಲ್ಲಿ ಮಹಾ ಎಡವಟ್ಟು ನಡೆದಿದೆ. ಇಂದು (ಆ.6) ನಡೆದ ಬಿ.ಕಾಂ ನ ಇ- ಕಾಮರ್ಸ್ ಪರೀಕ್ಷೆಯಲ್ಲಿ ವಿ.ವಿ. ಸಿಬ್ಬಂದಿ ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆ ಕೊಡುವ ಬದಲು ಉತ್ತರ ಪತ್ರಿಕೆ ಕೊಟ್ಟಿದ್ದಾರೆ.
ಆರನೇ ಸೆಮಿಸ್ಟರ್ ವಿಧ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆ ನೀಡುವ ಬದಲು ಉತ್ತರ ಇರುವ ಪತ್ರಿಕೆ ನೀಡಿ ವಿ.ವಿ. ಸಿಬ್ಬಂದಿ ನಿರ್ಲಕ್ಷ್ಯ ವಹಿಸಿದ್ದಾರೆ. ಪರೀಕ್ಷೆ ಹಾಲ್ ನಲ್ಲಿ ಕುಳಿತಿದ್ದ ವಿದ್ಯಾರ್ಥಿಗಳು ಒಂದು ಕ್ಷಣ ಅಚ್ಚರಿಗೊಂಡಿದ್ದಾರೆ. ಮೌಲ್ಯಮಾಪಕರುಗಳಿಗೆ ನೀಡುವ ಉತ್ತರ ಪ್ರತಿಕೆಯನ್ನು ವಿದ್ಯಾರ್ಥಿಗಳಿಗೆ ನೀಡಿ ಎಡವಟ್ಟು ಮಾಡಿಕೊಂಡಿದ್ದಾರೆ. ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿರುವ 60 ಕಾಲೇಜುಗಳ ಪೈಕಿ 15 ಕಾಲೇಜುಗಳಿಗೆ ಪರೀಕ್ಷೆಯಲ್ಲಿ ಈ ತೊಂದರೆ ಉಂಟಾಗಿದೆ. ಈ ಘಟನೆ ನಂತರ ದಾವಣಗೆರೆ ವಿಶ್ವವಿದ್ಯಾಲಯ ಪರೀಕ್ಷಾಂಗ ಕುಲಸಚಿವ ರಮೇಶ್ ಇಂದು ನಡೆಯಬೇಕಿದ್ದ ಪರೀಕ್ಷೆಯನ್ನು ಮುಂದೂಡಿದ್ದಾರೆ.