Connect with us

Dvgsuddi Kannada | online news portal | Kannada news online

ಸರ್ಕಾರದ ವಿವಿಧ ಯೋಜನೆಯಡಿಯಲ್ಲಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಪ್ರಮುಖ ಸುದ್ದಿ

ಸರ್ಕಾರದ ವಿವಿಧ ಯೋಜನೆಯಡಿಯಲ್ಲಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ದಾವಣಗೆರೆ: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ವತಿಯಿಂದ 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ವಿವಿಧ ನಿಗಮಗಳಾದ ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಸವಿತಾ-ಸಮಾಜ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಅಲೆಮಾರಿ-ಅರೆಮಾರಿ ಅಭಿವೃದ್ಧಿ ನಿಗಮ (ನಿ)., ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಕಾಡುಗೊಲ್ಲ ಅಭಿವೃದ್ಧಿ ನಿಗಮ (ನಿ) ಗಳಲ್ಲಿ ವಿವಿಧ ಯೋಜನೆಯಡಿಯಲ್ಲಿ ಸಾಲ ಮತ್ತು ಸಹಾಯಧನ ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಸೇವಾ ಸಿಂಧು ತಂತ್ರಾಂಶದಲ್ಲಿ ಆನ್‍ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವಿವಿಧ ಯೋಜನೆಗಳಾದ ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ/ ಕಾಯಕ ಕಿರಣ/ಶಹಾಜೀರಾಜೆ ಸಮೃದ್ಧಿ ಯೋಜನೆ., ಗಂಗಾ ಕಲ್ಯಾಣ ನೀರಾವರಿ ಯೋಜನೆ/ ಜೀವಜಲ/ ಜೀಜಾವು ಜಲಭಾಗ್ಯ ಯೋಜನೆ., ಅರಿವು –ಶೈಕ್ಷಣಿಕ ಸಾಲ ಯೋಜನೆ., ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ., ಸ್ವಾವಲಂಬಿ ಸಾರಥಿ ಯೋಜನೆ., ಸ್ವಯಂ ಉದ್ಯೋಗಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ)., ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಗೆ ವೆಬ್ ಸೈಟ್ https://www.kaushalkar.com ನಲ್ಲಿ ಅರ್ಜಿ ಸಲ್ಲಿಸಬಹುದು.

ಹೊಲಿಗೆ ಯಂತ್ರ ವಿತರಣೆ ಯೋಜನೆ ( ದೇವರಾಜ ಅರಸು ನಿಗಮದ ವ್ಯಾಪ್ತಿಗೆ ಒಳಪಡುವ ಸಮುದಾಯದವರಿಗೆ)., ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು ಯೋಜನೆ (ವಿಶ್ವrಕರ್ಮ ಸಮುದಾಯದವರಿಗೆ ಮಾತ್ರ)., ಭೋಜನಾಲಯ ಕೇಂದ್ರ (ವೀರಶೈವ-ಲಿಂಗಾಯತ ಸಮುದಾಯದವರಿಗೆ)., ವಿಭೂತಿ ನಿರ್ಮಾಣ ಘಟಕ (ವೀರಶೈವ-ಲಿಂಗಾಯತ ಸಮುದಾಯದವರಿಗೆ). ಮತ್ತು ಮರಾಠ ಮಿಲ್ಟ್ರಿ ಹೋಟೆಲ್ ಯೋಜನೆ (ಮರಾಠ ಸಾಮುದಾಯದವರಿಗೆ)ಗಳ ಸಾಲ ಸೌಲಭ್ಯ ಪಡೆಯಬಹುದು.

ಆಸಕ್ತರು ಅರ್ಜಿಗಳನ್ನು ಸೇವಾ ಸಿಂಧು ತಂತ್ರಾಂಶದಲ್ಲಿ ಆಗಸ್ಟ್ 31ರೊಳಗೆ ಸಲ್ಲಿಸಬಹುದು. 2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾ,ಪಕರ ಕಚೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತ ಸಂಪರ್ಕಿಸಿ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top