ದಾವಣಗೆರೆ: ಜಿಲ್ಲೆಯ ಹರಿಹರ ತಾಲ್ಲೂಕಿನ ದೀಟೂರು ಬಳಿ ತುಂಗಭದ್ರಾ ನದಿಯಿಂದ 57 ಕೆರೆಗಳಿಗೆ ನೀರು ಒದಗಿಸುವ ಪೈಪ್ಲೈನ್ ಒಡೆದು ಆಗಸದೆತ್ತರಕ್ಕೆ ನೀರು ಚಿಮ್ಮಿದ ಘಟನೆ ಜರುಗಿದೆ.
ತುಂಗಭದ್ರಾ ನದಿಯಿಂದ ಜಗಳೂರು ತಾಲ್ಲೂಕಿನ 57 ಕೆರೆಗಳಿಗೆ ನೀರು ಹರಿಸುವ ಯೋಜನೆ ಇದಾಗಿದ್ದು, ಇಲ್ಲಿನ ಪಂಪ್ ಹೌಸ್ ಬಳಿಯಿಂದ ನೀರು ಸರಬರಾಜು ಆಗುವ ಪೈಪ್ ಲೈನ್ ಒಡೆದು ಅಪಾರ ಪ್ರಮಾಣದ ನೀರು ಪೋಲಾಗಿದೆ. ಇದರಿಂದ ಹರಪನಹಳ್ಳಿ ಹರಿಹರ ಹೆದ್ದಾರಿಯಲ್ಲಿ ಹಲವು ಗಂಟೆಗಳ ಕಾಲ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ನೀರು ಮೇಲೆಕ್ಕೆ ಚಿಮ್ಮುತ್ತಿರುವುದರಿಂದ ಕೆಲ ಕಾಲ ಸಂಚಾರಕ್ಕೆ ತೊಂದರೆ ಉಂಟಾಗಿತ್ತು.



