ದಾವಣಗೆರೆ: 2024-25ನೇ ಶೈಕ್ಷಣಿಕ ವರ್ಷಕ್ಕೆ ಕರ್ನಾಟಕದ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ-ಶಿವಮೊಗ್ಗ, ಕೃಷಿ ವಿಶ್ವವಿದ್ಯಾಲಯ-ಬೆಂಗಳೂರು ಮತ್ತು ಧಾರವಾಡ, ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ- ರಾಯಚೂರು ಹಾಗೂ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ-ಬಾಗಲಕೋಟೆ ಈ ಐದು ಕಾಲೇಜುಗಳಲ್ಲಿ ವಿವಿಧ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶ ಬಯಸುವವರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು https://pg.admission.kar.nic.in ಅಥವಾ ವಿಶ್ವವಿದ್ಯಾಲಯಗಳ ಅಂತರ್ಜಾಲತಾಣಗಳಲ್ಲಿ ಲಭ್ಯವಿರುವ ಸಾಮಾನ್ಯ ಸ್ನಾತಕೋತ್ತರ ಪ್ರವೇಶ ಮಾಹಿತಿ ಕಿರುಹೊತ್ತಿಗೆಯಲ್ಲಿ ವಿವರಗಳನ್ನು ಪಡೆದುಕೊಂಡು ಸೆ.09ರೊಳಗಾಗಿ ಅರ್ಜಿ ಸಲ್ಲಿಸುವಂತೆ ಕೆ.ಶಿ.ನಾ.ಕೃ.ತೋ.ವಿ.ವಿಯ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.