ದಾವಣಗೆರೆ: ಬಾಪೂಜಿ ಮಕ್ಕಳ ಆಸ್ಪತ್ರೆಯಲ್ಲಿ ಕರ್ತವ್ಯನಿರತ ವೈದ್ಯರಗಳ ಮೇಲೆ ಹಲ್ಲೆ ನಡೆಸಿದ ಆರೋಪ ಹಿನ್ನೆಲೆ ವ್ಯಕ್ತಿಯೊಬ್ಬರನ್ನು ಬಡಾವಣೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ರವಿಕುಮಾರ್ ಬಂಧಿತ ಆರೋಪಿಯಾಗಿದ್ದು, ನ್ಯಾಯಾಧೀಶರ ಎದುರು ಹಾಜರುಪಡಿಸಿ, ನ್ಯಾಯಾಂಗ. ಬಂಧನದಲ್ಲಿ ಇರಿಸಲಾಗಿದೆ. ಜೆಜೆಎಂ ವೈದ್ಯಕೀಯ ಕಾಲೇಜಿನ ವೈದ್ಯಕೀಯ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದ ಡಾ.ಸನ್ನಿದಿ ನಾಯ್ಕ, ಡಾ.ಡಿ.ಎಸ್.ನಿಶಾಂತ್ ಹಾಗೂ ಡಾ.ಅಂಕುಶ್ ಅವರು ರಾತ್ರಿ ಪಾಳಿಯಲ್ಲಿ ಬಾಪೂಜಿ ಮಕ್ಕಳ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆರೋಪಿ ರವಿಕುಮಾರ್ ಅನಾರೋಗ್ಯದಿಂದ ಬಳಲುತ್ತಿದ್ದ ಪುತ್ರಿ ತಾನ್ವಿ (4) ಹಾಗೂ ಪತ್ನಿ ಉಷಾ ಅವರೊಂದಿಗೆ ಮಧ್ಯರಾತ್ರಿ ಆಸ್ಪತ್ರೆಗೆ ಬಂದಿದ್ದರು.
ಬಾಲಕಿಯ ಆರೋಗ್ಯ ಪರೀಕ್ಷಿಸಿ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿತ್ತು ಬಾಲಕಿಯ ಆರೋಗ್ಯದಲ್ಲಿ ತೀವ್ರ ಏರುಪೇರು ಕಾಣಿಸಿಕೊಂಡಿತ್ತು. ಚಿಕಿತ್ಸೆ ನೀಡುತ್ತಿರುವಾಗ ಐಸಿಯುಗೆ ನುಗ್ಗಿದ ರವಿಕುಮಾರ್, ವೈದ್ಯರ ಮೇಲೆ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದರು ಎಂದು ಠಾಣೆಗೆ ವೈದ್ಯರು ದೂರು ನೀಡಿದ್ದರು.



