ಬೆಂಗಳೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಫಾಸ್ಟ್ಫುಡ್ ತಯಾರಿಕಾ ಕುರಿತ 10 ದಿನಗಳ ಉಚಿತ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 13 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ,ಮೊಬೈಲ್ ಸಂಖ್ಯೆ: 9380162042, 9740982585 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



