ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಯಲ್ಲಿ ಮೂರ್ನಾಲ್ಕು ದಿನ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಳಗಾವಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡಿನ ಕಲಬುರಗಿ, ಯಾದಗಿರಿ, ಬೀದರ್ ಸೇರಿ ಒಟ್ಟು ಹನ್ನೊಂದು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.
ಗಾಳಿಯ ಪ್ರತಿ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಬೀಸಲಿದೆ. ಉತ್ತರ ಒಳನಾಡಿನ ಕೆಲ ಜಿಲ್ಲೆ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳ ಆಯ್ದ ಸ್ಥಳದಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆ ಇರಲಿದೆ.



