Connect with us

Dvgsuddi Kannada | online news portal | Kannada news online

ಐಟಿಐ ವಿದ್ಯಾರ್ಥಿಗಳಿಗೆ ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಪ್ರಮುಖ ಸುದ್ದಿ

ಐಟಿಐ ವಿದ್ಯಾರ್ಥಿಗಳಿಗೆ ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ದಾವಣಗೆರೆ: ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‌ಎಎಲ್) ಬೆಂಗಳೂರು ಇಲ್ಲಿ ಐಟಿಐ ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಗೆ ಒಂದು ವರ್ಷದ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಎಸ್‌ಎಸ್‌ಎಲ್‌ಸಿ + ಐಟಿಐ, ಫಿಟ್ಟರ್, ಟರ್ನರ್, ಮಷಿನಿಸ್ಟ್, ಎಲೆಕ್ಟ್ರೀಷಿಯನ್, ವೆಲ್ಡರ್, ಸಿಒಪಿಎ (COPA), ಕಾರ್ಪೆಂಟರ್, ಫೌಂಡ್ರಿಮನ್, ಶೀಟ್ ಮೆಟಲ್ ವರ್ಕರ್, ಟೂಲ್ ಆಂಡ್ ಡೈಮೇಕರ್, ಸಿಎನ್‌ಸಿ ಪ್ರೋಗ್ರಾಮರ್ ಕಂ ಆಪರೇಟರ್‌ನಲ್ಲಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು.
ಆಸಕ್ತರು ತಮ್ಮ ಎಸ್‌ಎಸ್‌ಎಲ್‌ಸಿ+ ಐಟಿಐ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್, ಪೋರ್ಟಲ್ ರಿಜಿಸ್ಟ್ರೇಷನ್ ಸಂಖ್ಯೆ, ಎಂಪ್ಲಾಯ್ಮೆಟ್ ಕಾರ್ಡ್, ಪಾಸ್‌ಪೋರ್ಟ್ ಸೈಜಿನ 4 ಫೋಟೋಗಳು ಈ ಎಲ್ಲಾ ದಾಖಲೆಗಳ ಮೂಲ ಪ್ರತಿ ಹಾಗೂ 2 ಸೆಟ್ ಜೆರಾಕ್ಸ್ ಪ್ರತಿಯನ್ನು ತೆಗೆದುಕೊಂಡು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ 05/10/2024 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿ ಮತ್ತು ಅರ್ಜಿ ನಮೂನೆಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಸಂಪರ್ಕಿಸಿ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top