ಡಿವಿಜಿ ಸುದ್ದಿ, ದಾವಣಗೆರೆ: ಭ್ರಷ್ಟ ಅಧಿಕಾರಿಗಳ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ನಿನ್ನೆ ಮಾತನಾಡಿದ್ದಾರೆ. ಮುಖ್ಯಮಂತ್ರಿಗಳು ವಿಧಾನಸೌಧದ ಮೊದಲ ಮಹಡಿಯನ್ನು ಮೊದಲು ಸರಿಪಡಿಸಬೇಕು. ಈ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಆತ್ಮ ವಿಮರ್ಶೆ ಮಾಡಿಕೊಳ್ಳಲಿ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದರು.
ಹರಿಹರ ತಾಲ್ಲೂಕಿನ ರಾಜನಹಳ್ಳಿ ಗುರುಪೀಠದಲ್ಲಿ ಆಯೋಜಿಸಿದ್ದ ವಾಲ್ಮೀಕಿ ಜಾತ್ರೆಯಲ್ಲಿ ಭಾಗವಹಿಸಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ರೈತರ ಸಾಲ ಮನ್ನಾ ಯೋಜನೆ ಸೇರಿದಂತೆ ಅನೇಕ ಯೋಜನೆಯಲ್ಲಿ ಕೆಲವು ಅಧಿಕಾರಿಗಳೇ ಸುಳ್ಳು ದಾಖಲೆಗಳನ್ನು ಸೃಷ್ಠಿ ಮಾಡಿ ಹಣ ಬಳಸಿಕೊಂಡಿದ್ದಾರೆ. ಕೆಲವು ಕಡೆ ಚೆಕ್ ಕೊಟ್ಟಿದ್ದನ್ನು ವಾಪಸ್ಸು ಪಡೆದಿದ್ದಾರೆ. ಈ ಬಗ್ಗೆ ವಿಧಾನಸೌಧದ ಮೂರನೇ ಮಹಡಿಯಲ್ಲಿ ಮೊದಲು ಸರಿಪಡಿಸಬೇಕು. ಈ ಬಗ್ಗೆ ಈಗಲಾದರೂ ಮುಖ್ಯಮಂತ್ರಿ ಗಳು ಆತ್ಮವಲೋಕನ ಮಾಡಿಕೊಳ್ಳುವುದು ಒಳ್ಳೆಯದು.
ಭ್ರಷ್ಟಾಚಾರ ಮೂಲವನ್ನು ಮೊದಲು ಕಂಡು ಹಿಡಿಯಬೇಕಿದೆ. ಮೂಲ ಕಂಡು ಹಿಡಿದು ಅದನ್ನು ಅಲ್ಲಿಯೇ ಚಿವುಟಬೇಕಿದೆ. ವಿಧಾನ ಹಿರಿಯ ಅಧಿಕಾರಿಗಳೇ ಭ್ರಷ್ಟಾಚಾರದಲ್ಲಿ ತೊಡಿದ್ದಾರೆ. ಈ ಬಗ್ಗೆ ಸಿಎಂ ಆತ್ಮವಿಮರ್ಶೆ ಮಾಡಿಕೊಳ್ಳಬೇಕು ಎಂದರು.



