ದಾವಣಗೆರೆ: ನಗರದ ಕುಂದವಾಡ ಕೆರೆಯಲ್ಲಿ ಶವವೊಂದು ಪತ್ತೆಯಾಗಿದೆ. ಅರಸೀಕೆರೆ ಗ್ರಾಮದ ವಿಜಯಕುಮಾರ್ (55) ಮೃತರು ಎಂದು ಗುರುತಿಸಲಾಗಿದೆ. ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಅರಸೀಕೆರೆ ಗ್ರಾಮದ ವಿಜಯಕುಮಾರ್ ನಿನ್ನೆ ದಾವಣಗೆರೆಗೆ ಜಮೀನಿಗೆ ಔಷಧ ತರಲು ಬಂದಿದ್ದರು. ಬಳಿಕ ಕೆರೆಗೆ ಹಾರಿ ಸಾವನ್ನಪ್ಪಿದ್ದಾನೆ.
ನಿನ್ನೆ ಸಂಬಂಧಿಕರಿಂದ ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಾಗಿತ್ತು. ಮಾನಸಿಕವಾಗಿ ತೊಂದರೆ ಅನುಭವಿಸುತ್ತಿದ್ದ ಎಂದು ಕುಟುಂಬ ಸದಸ್ಯರು ಮಾಹಿತಿ ನೀಡಿದ್ದಾರೆ. ವಾಯುವಿಹಾರಿಗಳು ಕೆರೆಯಲ್ಲಿ ಶವ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ದಾವಣಗೆರೆ ವಿದ್ಯಾನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.