ದಾವಣಗೆರೆ: 2024-25 ನೇ ಸಾಲಿನ ಕೃಷಿ ಪಂಡಿತ ಪ್ರಶಸ್ತಿ ಯೋಜನೆಯಡಿ ರಾಜ್ಯ ಕೃಷಿ ಕ್ಷೇತ್ರದಲ್ಲಿ ವಿನೂತನ ಅಥವಾ ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿರುವ ಹಾಗೂ ರೈತ ಸಮುದಾಯದ ಅಭಿವೃದ್ದಿಗೆ ಅಪಾರ ಕೊಡಗೆ ನೀಡುತ್ತಿರುವ ರೈತ, ರೈತ ಮಹಿಳೆಯರಿಂದ ಪ್ರತ್ಯೇಕವಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಆಸಕ್ತ ನೂತನವಾಗಿ ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ರೈತ, ರೈತ ಮಹಿಳೆಯರು ರೈತಸಂಪರ್ಕಕೇಂದ್ರ, ಸೇವಾಕೇಂದ್ರ ಕೆ.ಕಿಸಾನ್ ಪೋರ್ಟಲ್ ತಂತ್ರಾಂಶದ ಮೂಲಕ ಮೂಲ ದಾಖಲಾತಿಗಳೊಂದಿಗೆ ತಮ್ಮ ಎಫ್ ಐಡಿ (Fruits Identification) ಯನ್ನು ಬಳಸಿಕೊಂಡು ಸೆಪ್ಟೆಂಬರ್ 30,2024 ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ಕೃಷಿ ನಿರ್ದೇಶಕರ ಕಾರ್ಯಾಲಯ ಅಥವಾ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಬಹುದು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



