ಡಿವಿಜಿ ಸುದ್ದಿ, ದಾವಣಗೆರೆ: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಮತ್ತು ಅವರ ಸಹೋದರರು ಸೇರಿಕೊಂಡು ಹೊನ್ನಾಳಿ, ನ್ಯಾಮತಿ ತಾಲೂಕಿನಲ್ಲಿ ಕಾನೂನು ಸುವ್ಯವಸ್ಥೆ ಹಾಳು ಮಾಡುತ್ತಿದ್ದಾರೆ. ಇವರ ಈ ದುರಾಡಳಿತದ ವಿರುದ್ಧ ಫೆ. 13 ರಂದು ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಏಕಾಂಗಿಯಾಗಿ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಭ್ರಷ್ಟಾಚಾರ ವಿರೋಧಿ ವೇದಿಕೆ ಗೌರವಾಧ್ಯಕ್ಷ ಗುರುಪಾದಯ್ಯ ಮಠದ್ ಹೇಳಿದರು.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊನ್ನಾಳಿ ಮತ್ತು ನ್ಯಾಮತಿ ತಾಲೂಕಿನಲ್ಲಿ ಸಾರ್ವಜನಿಕರ ಯಾವುದೇ ಕೆಲಸವಾಗುತ್ತಿಲ್ಲ. ಎಲ್ಲಾ ಕೆಲಸದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ. ಆಡಳಿತದಲ್ಲಿ ಶಾಸಕರು ಹಾಗೂ ಅವರ ಸಹೋದರ ಹಸ್ತಕ್ಷೇಪದಿಂದ ಸರ್ವಾಧಿಕಾರ ಧೋರಣೆ ಅನುಸರಿಸುತ್ತಿದ್ದಾರೆ. ಪ್ರಚೋದನಾತ್ಮಕ ಹೇಳಿಕೆಯಿಂದ ಎರಡು ತಾಲೂಕಿನಲ್ಲಿ ಅಶಾಂತಿ ವಾತಾವರಣ ಉಂಟಾಗಿದೆ. ಕೋಮುಸಾಮರಸ್ಯಕ್ಕೆ ಧಕ್ಕೆಯಾಗಿದೆ. ತಮ್ಮ ದುರಾಡಳಿತದಿಂದ ಹೊನ್ನಾಳಿಯನ್ನು ರಿಪಬ್ಲಿಕ್ ಆಫ್ ಹೊನ್ನಾಳಿ ಮಾಡಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸುದರು.
ಸರ್ಕಾರ ರೂಪಿಸಿದ ಮರಳು ನೀತಿಯನ್ನು ಉಲ್ಲಂಘಿಸಿ ಹಿಂಬಾಲಕರೊಂದಿಗೆ ಕಾನೂನು ಬಾಹಿರ ಮರಳು ಮಾಫಿಯಕ್ಕೆ ಉತ್ತೇಜನ ನೀಡುತ್ತುದ್ದಾರೆ. ಉದ್ಯೋಗ ಖಾತ್ರಿ ಸೇರಿದಂತೆ ವಿಧಧ ಕಾಮಗಾರಿಯಲ್ಲಿ ಭ್ರಷ್ಟಾಚಾರ ಮಿತಿಮೀರಿದೆ. ಇನ್ನು ತಾಲ್ಲೂಕಿನಲ್ಲಿ ಸಮುದಾಯದ ಮಧ್ಯೆ ಬೆಂಕಿ ಹಚ್ಚಿ ತಮ್ಮ ಬೇಳೆ ಬೇಯಿಸಿಕೊಳ್ಳುತಗತಿದ್ದಾರೆ. ಇದೆಲ್ಲದರ ವಿರುದ್ಧ ಜಿಲ್ಲಾಧಿಕಾರಿ ಕಚೇರಿ ಮುಂದೆ ಏಕಾಂಗಿಯಾಗಿ ಪ್ರತಿಭಟನೆ ನಡೆಸಲು ನಿರ್ಧರಿಸಿರುವುದಾಗಿ ತಿಳಿಸಿದರು.



